ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರ ಪಟ್ಟಣದಲ್ಲಿ ಗಾಂಜಾ ಮಾರಾಟ ಮಾಡಿದ್ದ ಆರೋಪದಲ್ಲಿ ಬಂಧಿತರಾಗಿದ್ದ ಇಬ್ಬರ ಅರೋಪ ಸಾಬೀತಾಗಿದ್ದು, ಇಬ್ಬರಿಗೂ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು #Imprisonment ವಿಧಿಸಲಾಗಿದೆ.
ಏನಿದು ಪ್ರಕರಣ?
2021ರಲ್ಲಿ ಸಾಗರದ ಬಿಎಚ್ ರಸ್ತೆ ಸದ್ಗುರು ಲೇ ಔಟ್ ಬಳಿಯಲ್ಲಿ ಪಟ್ಟಣದ ಇಮ್ರಾನ್ ಖಾನ್(25) ಹಾಗೂ ಇಮ್ತಿಯಾಜ್(28) ಎನ್ನುವವರು ಗಾಂಜಾ ಮಾರಾಟ ಮಾಡುತ್ತಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ್ದ ಸಾಗರ ಟೌನ್ ಪಿಐ ಅಶೋಕ್ ಕುಮಾರ್ ನೇತೃತ್ವದ ತಂಡ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದರು.
ಆರೋಪಿಗಳಿಂದ 1 ಕೆ.ಜಿ 60 ಗ್ರಾಂ ಒಣ ಗಾಂಜಾ ಮತ್ತು 800/- ರೂ ನಗದು ಹಣ ಮತ್ತು ಗಾಂಜಾ ಮಾರಾಟ ಮಾಡಲು ಬಳಸಿದ ಮಾರುತಿ ಓಮಿನಿ ಕಾರನ್ನು ವಶಕ್ಕೆ ಪಡೆದಿದ್ದರು.
ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಪಿಎಸ್’ಐ ಸಾಗರ್ ಕರ್ ಅವರು ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಎ.ಎಂ. ಸುರೇಶ್ ಕುಮಾರ್ ವಾದಿಸಿದ್ದರು.
ವಿಚಾರಣೆಯಲ್ಲಿ ಆರೋಪ ಸಾಭೀತಾಗಿದ್ದು, ಇಬ್ಬರಿಗೂ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರು ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post