ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಗರದ ಹೃದಯ ಭಾಗದಲ್ಲಿ ಕಾರ್ತಿಕ್ ಹತ್ಯೆ ಬೆನ್ನಲ್ಲೇ, 10 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹಾಲಿ ಹಾಗೂ ಮಾಜಿ ಸಂಸದರು ವಾಗ್ದಾಳಿ ನಡೆಸಿದ್ದಾರೆ.
ಸಂಸದ ಯದುವೀರ್ ಒಡೆಯರ್ ಚಾಟಿ
ಪ್ರಕರಣಗಳ ಹಿನ್ನೆಲೆಯಲ್ಲಿ ಮಾತನಾಡಿರುವ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, #Yaduveer Krishnadatta Chamaraja Wadeyar ಮೈಸೂರಿನಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎನ್ನುವುದುರಲ್ಲಿ ಅನುಮಾನವಿಲ್ಲ ಎಂದರು.
ದಸರಾ #Dasara ಸಂದರ್ಭದಲ್ಲಿ ಬಲೂನು ಮಾರಲು ಕಲಬುರಗಿಯಿಂದ ಹಕ್ಕಿಪಿಕ್ಕಿ ಜನಾಂಗದ ಕುಟುಂಬಸ್ತರು ಬಂದಿದ್ದರು. ಈ ಕುಟುಂಬದ 10 ವರ್ಷದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಘಟನೆ ನಡೆದಿರುವುದನ್ನು ಖಂಡಿಸುತ್ತೇವೆ.
ಮೈಸೂರಿನಿಂತಹ ಊರಿನಲ್ಲಿ ಇಂತಹ ಘಟನೆ ನಡೆದಿದೆ ಎನ್ನುವುದು ಕಾನೂನು ಸುವ್ಯವಸ್ಥೆ ಕುಸಿದಿದೆ ಎನ್ನುವುದನ್ನು ತೋರಿಸುತ್ತದೆ ಎಂದು ಕಿಡಿ ಕಾರಿದರು.
ಮಾಜಿ ಎಂಪಿ ಪ್ರತಾಪ್ ಸಿಂಹ ಕಿಡಿ
ಇನ್ನು, ಘಟನೆ ಕುರಿತಂತೆ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, #Pratap Simha ನಗರದ ಹೃದಯ ಭಾಗದಲ್ಲಿಯೇ ಇಂತಹ ಘಟನೆ ನಡೆದಿದೆ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿದ್ದಾರೆ.
ನಗರದ ಹೃದಯಭಾಗದಲ್ಲಿಯೇ ಕಾರ್ತಿಕ್ ಕೊಲೆ ಆದಾಗಲೇ ಪೊಲೀಸ್ ಇಲಾಖೆ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ, ನಿರ್ಲಕ್ಷದ ಹಿನ್ನೆಲೆಯಲ್ಲಿ ಬಾಲಕಿಯ ಘಟನೆ ನಡೆದಿದೆ. ಪೋಷಕರ ಜೊತೆಯಲ್ಲಿ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿ, ಕೊಲೆ ಮಾಡುತ್ತಾನೆ, ಅದೂ ನಗರದ ಹೃದಯ ಭಾಗದಲ್ಲೇ ಎಂದರೆ ಕಾನೂನು ಸುವ್ಯವಸ್ಥೆ ಹೇಗಿದೆ ಎನ್ನುವುದು ತಿಳಿಯುತ್ತದೆ ಎಂದರು.
ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಸರ್ಕಾರದ ಯಾರೊಬ್ಬರು ಯಾಕೆ ಧ್ವನಿ ಎತ್ತಿಲ್ಲ? ರಾಜ್ಯ ಸರ್ಕಾರದಲ್ಲಿ ಕೂಗು ಮಾರಿಗಳಿದ್ದಾರೆ. ಉಕ್ರೇನ್, ರಷ್ಯಾದ ಬಗ್ಗೆ ಕಾಮೆಂಟ್ ಮಾಡುತ್ತಾರೆ. ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಬಾಲಕಿ ಕೊಲೆ ಪ್ರಕರಣದ ಬಗ್ಗೆ ಯಾಕೆ ಮಾತಾಡಲ್ಲ ಎಂದು ಪ್ರಶ್ನಿಸಿದ್ದಾರೆ.
ಪ್ರಿಯಾಂಕ ಖರ್ಗೆ, ಲಾಡ್, ಚಿಕ್ಕಬಳ್ಳಾಪುರದ ಕೂಗು ಮಾರಿ ಇವರಲ್ಲಿ ಒಬ್ಬನಾದರೂ ಬಾಯಿ ತೆರೆಯುತ್ತಿದ್ದನಾ? ಸಿಎಂ, ಡಿಸಿಎಂ ಯಾಕೆ ಈ ಬಗ್ಗೆ ಮಾತಾಡುತ್ತಿಲ್ಲ? ಸಿದ್ದರಾಮಯ್ಯ #Siddaramaiah ಅವರೇ ಯಾವ ಪುರುಷಾರ್ಥಕ್ಕೆ ನೀವು ಸಿಎಂ ಆಗಿದ್ದೀರಿ? ಹಕ್ಕಿಪಿಕ್ಕಿ ಜನಾಂಗದ ಬಾಲಕಿ ಕೊಲೆಗೆ ಯಾಕೆ ಯಾರೂ ಧ್ವನಿ ಎತ್ತುತ್ತಿಲ್ಲ? ಸಿಎಂಗೆ ಅಂತಃಕಾರಣವೇ ಇಲ್ಲ. ಸಿಎಂ ಹೃದಯ ಕಲ್ಲಾಗಿದೆ ಎಂದು ಗುಡುಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post