ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಹಿರಿಯ ಹಾಸ್ಯ ನಟ ಉಮೇಶ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಯೋ ಸಹಜ ಅಸ್ವಸ್ಥತೆಯಿಂದ ಬಳಲುತ್ತಿರುವ ಅವರು, ಇಂದು ತಮ್ಮ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸಮೀಪದ ಖಾಸಗೀ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಅವರ ಆರೋಗ್ಯಸ್ಥಿತಿ ಗಂಭೀರವಾಗಿದ್ದು, ಅವರ ಕುಟುಂಬಸ್ಥರು ಹಾಗೂ ಆಸ್ಪತ್ರೆಯಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟರಾದ ಉಮೇಶ್, ಸ್ಯಾಂಡಲ್’ವುಡ್’ನ ಎಲ್ಲ ದಿಗ್ಗಜರ ಜೊತೆಯಲ್ಲಿ ಪರದೆ ಹಂಚಿಕೊAಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post