No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕ್ಷಣದಲ್ಲಿ ಸಮಾನತೆ – ಗುಣಮಟ್ಟ ಸಾಧಿಸುವಲ್ಲಿ ಯಶಸ್ವಿ: ಸಚಿವ ಮಧುಬಂಗಾರಪ್ಪ

ಪತ್ರಿಕಾ ಭವನದಲ್ಲಿ ಮಾಧ್ಯಮದವರೊಡನೆ ಸಂವಾದ ಕಾರ್ಯಕ್ರಮ

kalpa News by kalpa News
October 11, 2025
in ಶಿವಮೊಗ್ಗ
0
ಶಿಕ್ಷಣದಲ್ಲಿ ಸಮಾನತೆ – ಗುಣಮಟ್ಟ ಸಾಧಿಸುವಲ್ಲಿ ಯಶಸ್ವಿ: ಸಚಿವ ಮಧುಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಾವು ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಸಚಿವರಾಗಿ ಅಧಿಕಾರ ವಹಿಸಿಕೊಂಡ 2ವರ್ಷ 4 ತಿಂಗಳಲ್ಲಿ ಶಿಕ್ಷಣದಲ್ಲಿ ಸಮಾನತೆ ಮತ್ತು ಗುಣಮಟ್ಟ ಸಾಧಿಸುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಎಸ್. ಮಧುಬಂಗಾರಪ್ಪ ತಿಳಿಸಿದರು.

ಅವರು ಇಂದು ಪತ್ರಿಕಾ ಭವನದಲ್ಲಿ ಮಾಧ್ಯಮದವರೊಡನೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ಸಮಸ್ಯೆಗಳುಳ್ಳ ಇಲಾಖೆಯನ್ನೇ ಪಕ್ಷದ ಮುಖಂಡರು ನನಗೆ ನೀಡಿ ದೊಡ್ಡ ಜವಾಬ್ದಾರಿ ವಹಿಸಿದ್ದರು. ಅದನ್ನು ಅತ್ಯಂತ ನಿಷ್ಠೆ ಮತ್ತು ಗೌರವದಿಂದ ನಿಭಾಯಿಸಿದ್ದೇನೆ. ನಮ್ಮ ತಂದೆ ಎಸ್. ಬಂಗಾರಪ್ಪನವರೇ ನನಗೆ ಗುರುವಾಗಿದ್ದರು. ಅವರ ಜೊತೆಯಲ್ಲಿ ಬಹಳ ಕಾಲ ರಾಜಕೀಯದಲ್ಲಿ ಕೆಲಸ ಮಾಡಿದ್ದರಿಂದ ಸ್ವಾಭಾವಿಕವಾಗಿಯೇ ಯಾವುದೇ ಸವಾಲನ್ನು ಸ್ವೀಕರಿಸುವ ಗುಣ ನನ್ನಲ್ಲಿ ಬಂದಿದೆ. ಇದರ ಪರಿಣಾಮ ಸಮಸ್ಯೆಗಳ ಗೂಡಾಗಿರುವ ಶಿಕ್ಷಣ ಇಲಾಖೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು.
ತಾವು ಇಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇನೆಂಬ ನಿರೀಕ್ಷೆಯನ್ನು ಜನರಾಗಲಿ, ಪಕ್ಷದಲ್ಲಿ ಕೆಲವು ಮುಖಂಡರಾಗಲಿ ಮಾಡಿರಲಿಲ್ಲ. ಇದೊಂದು ದೊಡ್ಡ ಇಲಾಖೆ, ಸವಾಲಿನ ಮತ್ತು ಜವಾಬ್ದಾರಿಯ ಇಲಾಖೆ. ಈ ಇಲಾಖೆಯಡಿ ರಾಜ್ಯದಲ್ಲಿ 46 ಸಾವಿರ ಶಾಲೆಗಳು ಬರುತ್ತವೆ. ಇಲಾಖೆಯಲ್ಲಿನ ಶೇ.70ರಷ್ಟು ಸಮಸ್ಯೆಗಳನ್ನು ಬಗೆಹರಿಸಿದ ತೃಪ್ತಿ ನನಗಿದೆ. ಇಂದಿನ ಜಾತಿ, ಧರ್ಮ, ವ್ಯವಸ್ಥೆಯನ್ನು ಮೀರಿ ಇಲಾಖೆಯಲ್ಲಿ ಸುಧಾರಣೆಗಳನ್ನು ತಂದಿದ್ದೇನೆ. ಮಕ್ಕಳು ಹೂಗಳಿದ್ದಂತೆ ಅವುಗಳನ್ನು ಬಾಡದೇ ಇರುವಂತೆ ನೋಡಿಕೊಳ್ಳುವುದು ನನ್ನ ಇಲಾಖೆಯ ಜವಾಬ್ದಾರಿಯಾಗಿದೆ ಎಂದರು.

ತಾವು ಅಧಿಕಾರಿವಹಿಸಿಕೊಂಡ ಕೇವಲ 11 ತಿಂಗಳಲ್ಲಿ 13,500 ಶಿಕ್ಷಕರ ನೇಮಕಾತಿ ಮಾಡಿದ್ದೇನೆ. ಇನ್ನೂ 18,000 ಶಿಕ್ಷಕರ ನೇಮಕಾತಿಗೆ ಪ್ರಕ್ರಿಯೆಗಳು ಆರಂಭವಾಗಿವೆ. ಒಂದು ಸರ್ಕಾರಿ ಶಾಲೆಯಲ್ಲಿ ಕೇವಲ 1 ಮಗುವಿದ್ದರೂ ಅದನ್ನು ಮುಚ್ಚುವ ಪ್ರಸ್ತಾಪವನ್ನು ನಾನು ಮಾಡಿಲ್ಲ. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡುವುದೇ ನನ್ನ ಇಲಾಖೆಯ ಪ್ರಮುಖ ಉದ್ದೇಶ ಎಂದು ಭಾವಿಸಿದ್ದೇನೆ. ಮಕ್ಕಳಲ್ಲಿ ಸಾಮರ್ಥ್ಯ ವೃದ್ಧಿಸಲು ಮೂರು ಪರೀಕ್ಷಾ ಪದ್ಧತಿಯನ್ನು ಜಾರಿಗೆ ತಂದಿದ್ದಲ್ಲದೆ ವೆಬ್‍ಕಾಸ್ಟ್ ಮೂಲಕ ನಕಲು ತಡೆಗೆ ಮುಂದಾಗಿದ್ದೇನೆ. ಇದು ಶಾಲಾ ಶಿಕ್ಷಣ ಪದ್ಧತಿಯಲ್ಲಿ ಮಹತ್ವಪೂರ್ಣ ಬದಲಾವಣೆಗೆ ಮುನ್ನುಡಿ ಬರೆದಿದೆ ಎಂದರು.
ಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೆ ಒಂದು ಅವಧಿ ನೈತಿಕ ಶಿಕ್ಷಣ ಜಾರಿಗೆ ತರುವ ಆಲೋಚನೆ ಇದೆ. ಮುಂದಿನ ವರ್ಷದೊಳಗೆ ತೀರ್ಥಹಳ್ಳಿಯಲ್ಲಿ ವಿಶೇಷ ಚೇತನರಿಗೆ ವಸತಿಶಾಲೆ ಸ್ಥಾಪಿಸುವ ಯೋಜನೆ ಇದೆ. ಅಲ್ಲದೆ ಇಲಾಖೆಯ ಮೂಲಕ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಬೆಂಗಳೂರಿನಲ್ಲಿ ಕಿದ್ವಾಯ್ ಆಸ್ಪತ್ರೆ ಸಮೀಪ ಉಚಿತ ಚಿಕಿತ್ಸೆ ಸಹಿತ 1 ರಿಂದ 10ನೇ ತರಗತಿ ಮಕ್ಕಳಿಗೆ ವಸತಿ ಶಾಲೆ ಸ್ಥಾಪಿಸುವ ಯೋಜನೆ ಇದೆ. ಇದಕ್ಕೆ ಸಂಬಂಧಿಸಿದಂತೆ ಇನ್‍ಫೋಸೀಸ್ ಮುಖ್ಯಸ್ಥೆ ಸುಧಾಮೂರ್ತಿಯವರೊಡನೆ ಚರ್ಚಿಸಲಾಗಿದೆ.

ಇಲ್ಲಿಯವರೆಗೆ ರಾಜ್ಯದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಇದ್ದ 500 ಕೆಪಿಎಸ್ ಶಾಲೆಗಳ ಜೊತೆಯಲ್ಲಿ ಇನ್ನೂ 300 ಕೆಪಿಎಸ್ ಶಾಲೆ ಆರಂಭಿಸಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿಯೇ ಇನ್ನೂ ಹೆಚ್ಚುವರಿಯಾಗಿ 13 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು ಎಂದ ಅವರು, ಶಿಕ್ಷಣವನ್ನು ರಾಷ್ಟ್ರೀಕರಣ ಮಾಡಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
1995ರ ವರೆಗೆ ಆರಂಭಿಸಲಾದ ಶಾಲೆಗಳಿಗೆ ಸರ್ಕಾರ ಅನುದಾನ ನೀಡಿದ್ದು, ಇದನ್ನು 2005ರ ವರೆಗೆ ಆರಂಭಿಸಲಾದ ಶಾಲೆಗಳಿಗೂ ವಿಸ್ತರಿಸಲಾಗುವುದು. ವೃಕ್ಷೋತ್ಥಾನ ಹೆರಿಟೇಜ್ ರನ್ ಎಂಬ ಸಂಸ್ಥೆಗೆ ಪಿಯು ಕಾಲೇಜಿನ ಪ್ರತೀ ವಿದ್ಯಾರ್ಥಿಯಿಂದ 500 ರೂ. ಶುಲ್ಕ ತೆಗೆದುಕೊಳ್ಳಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪಕಾರ್ಯದರ್ಶಿ ಹೊರಡಿಸಿರುವ ಆದೇಶದ ಬಗ್ಗೆ ತಮಗೆ ಇನ್ನೂ ಮಾಹಿತಿ ಇಲ್ಲ. ಸಂಬಂಧಪಟ್ಟವರನ್ನು ಸಂಪರ್ಕಿಸಿ ಸ್ಪಷ್ಟೀಕರಣ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಪ್ರೆಸ್‍ಟ್ರಸ್ಟ್ ಅಧ್ಯಕ್ಷರಾದ ಎನ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ನಾಗರಾಜ್ ನೇರಿಗೆ, ಹೊನ್ನಾಳಿ ಚಂದ್ರಶೇಖರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಯುಡಬ್ಲ್ಯೂಜೆ ರಾಜ್ಯ – ಜಿಲ್ಲಾ ಘಟಕಗಳಿಗೆ ನ.9ರಂದು ಚುನಾವಣೆ

Next Post

ರಕ್ತದಾನವು ಮಹಾಭಾರತದ ಕರ್ಣನ ದಾನದಷ್ಟೇ ಶ್ರೇಷ್ಠ: ಹರ್ಷಾ ಕಾಮತ್

kalpa News

kalpa News

Next Post
ರಕ್ತದಾನವು ಮಹಾಭಾರತದ ಕರ್ಣನ ದಾನದಷ್ಟೇ ಶ್ರೇಷ್ಠ: ಹರ್ಷಾ ಕಾಮತ್

ರಕ್ತದಾನವು ಮಹಾಭಾರತದ ಕರ್ಣನ ದಾನದಷ್ಟೇ ಶ್ರೇಷ್ಠ: ಹರ್ಷಾ ಕಾಮತ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL