ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮನೆಯಲ್ಲಿ ಎಚ್ಚರ ತಪ್ಪಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕನ್ನಡದ ಹಿರಿಯ ನಟ ಉಮೇಶ್ #ActorUmesh ಅವರ ಕುರಿತಾಗಿ ಶಾಕಿಂಗ್ ವಿಚಾರವೊಂದು ಹೊರಬಿದ್ದಿದೆ.
ಹೌದು…ನಟ ಉಮೇಶ್ ಅವರಿಗೆ ಲಿವರ್ ಕ್ಯಾನ್ಸರ್ #LiverCancer 4ನೇ ಹಂತದಲ್ಲಿದೆ ಎಂಬ ವಿಚಾರ ಹೊರಬಿದ್ದಿದೆ.
ಉಮೇಶ್ ಅವರು ತಮ್ಮ ಮನೆಯಲ್ಲಿ ಬಿದ್ದ ಭುಜ ಹಾಗೂ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಅವರಿಗೆ ಸರ್ಜರಿ ಮಾಡುವ ಯೋಚನೆ ಹೊಂದಿದ್ದರು ವೈದ್ಯರು. ಈ ವೇಳೆ ಸ್ಕ್ಯಾನಿಂಗ್ #Scanning ಮಾಡಿಸಿದ ವೇಳೆ ಉಮೇಶ್ ಅವರಿಗೆ ಲಿವರ್ ಕ್ಯಾನ್ಸರ್ ಇರುವುದು ತಿಳಿದುಬಂದಿದೆ. ಲಿವರ್’ನಲ್ಲಿ ಹಾನಿ ಉಂಟುಮಾಡುವ ಗಡ್ಡೆ ಇರುವುದು ಪತ್ತೆಯಾಗಿದೆ. ಈ ಬಗ್ಗೆ ವೈದ್ಯರು ಅವರ ಕುಟುಂಬದ ಜೊತೆ ಚರ್ಚೆ ಮಾಡಿದ್ದಾರೆ.ಸದ್ಯ ವೈದ್ಯರ ಪರೀಕ್ಷೆ ಪ್ರಕಾರ ಲಿವರ್’ನಲ್ಲಿ ಕ್ಯಾನ್ಸರ್ ಉಂಟಾಗಿದ್ದು, ಅದು ಬೇರೆ ಅಂಗಗಳಿಗೆ ಸ್ಪೆçಡ್ ಆಗಿದೆ. ಉಮೇಶ್ ಅವರು ನೋಡಲು ಆರೋಗ್ಯವಾಗಿಯೇ ಕಾಣಿಸಿದದಾರೆ. ಆದರೆ, ಕ್ಯಾನ್ಸರ್ ಇದೆ. ಇದನ್ನು ಖಚಿತಪಡಿಸಲು ಕೆಲವು ಪರೀಕ್ಷೆ ಮಾಡಬೇಕಿದ್ದು, ಲಿವರ್ ಒಳಗೆ ಇರುವ ಗಡ್ಡೆಯನ್ನು ತೆಗೆದು ಪರೀಕ್ಷೆಗೆ ಕಳುಹಿಸಬೇಕಿದೆ ಎಂದು ವರದಿಯಾಗಿದೆ.
ಮುದ್ದಿನ ಪಾಳ್ಯದ ಶಾಂತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಿರಿಯ ಕಲಾವಿದ ಉಮೇಶ್ ಅವರು ಆಗೊಂದು ಈಗೊಂದು ಸಿನಿಮಾ ಮಾಡುತ್ತ ಜೀವನ ನಡೆಸುವುದು ಕಷ್ಟವಾದ ಈ ಕಾಲದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ಕಡೆ ಕೈಕೊಟ್ಟ ಆರೋಗ್ಯ ಮತ್ತೊಂದೆಡೆ ಕುಟುಂಬದ ನಿರ್ವಹಣೆ. ಹೀಗಾಗಿ, ಚಿತ್ರರಂಗದ ನೆರವಿಗಾಗಿ ಎದುರು ನೋಡುತ್ತಿದ್ದಾರೆ.
500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದ ಉಮೇಶ್ ಅವರಿಗೆ ಉನ್ನತ ಮಟ್ಟದ ಚಿಕಿತ್ಸೆಯ ಅವಶ್ಯಕತೆ ಇದೆ. ಇಷ್ಟೆಲ್ಲಾ ನೋವಿನಲ್ಲೂ ಸಿನಿಮಾದ ಡೈಲಾಗ್ ಹೇಳಿ ನಗೆ ಚಟಾಕಿ ಹಾರಿಸಿದ್ದಾರೆ ಹಿರಿಯ ನಟ ಉಮೇಶ್.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post