No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಸಂಶೋಧನೆಯಲ್ಲಿ ಹೆಚ್ಚು ನಿಖರತೆಯಿರಲಿ | ಡಾ. ಶಿವಪ್ರಸಾದ್ ಅಭಿಮತ

ಜೆಎನ್'ಎನ್'ಸಿಇಯಲ್ಲಿ ನಡೆದ ಕಾರ್ಯಾಗಾರ ಯಶಸ್ವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 11, 2025
in ಶಿವಮೊಗ್ಗ
0
ಶಿವಮೊಗ್ಗ | ಸಂಶೋಧನೆಯಲ್ಲಿ ಹೆಚ್ಚು ನಿಖರತೆಯಿರಲಿ | ಡಾ. ಶಿವಪ್ರಸಾದ್ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗುಣಾತ್ಮಕ ಸಂಶೋಧನೆಗಳು ದೇಶದ ಉನ್ನತಿಕರಣಕ್ಕೆ ಪ್ರಬಲವಾದ ಶಕ್ತಿಯಾಗಿದೆ ಎಂದು ಬೆಂಗಳೂರಿನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್’ನ ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರದ ಸಂಶೋಧನಾ ಸಹಾಯಕ ಡೀನ್ ಡಾ.ಪಿ.ವಿ. ಶಿವಪ್ರಸಾದ್ ಅಭಿಪ್ರಾಯಪಟ್ಟರು.

ನಗರದ ಜೆಎನ್’ಎನ್ ಎಂಜಿನಿಯರಿಂಗ್ #JNNCE ಕಾಲೇಜಿನಲ್ಲಿ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ಪಿಎಚ್’ಡಿ ಸಂಶೋಧನಾರ್ಥಿಗಳಿಗಾಗಿ ಏರ್ಪಡಿಸಿದ್ದ ಸಂಶೋಧನಾ ಸವಾಲುಗಳು ಮತ್ತು ಅವಕಾಶಗಳು ಕುರಿತ ಒಂದು ದಿನದ ಕಾರ್ಯಾಗಾರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಒಂದು ನಾಣ್ಯದ ಎರಡು ಮುಖ. ಸಂಶೋಧನೆಯ ಫಲಿತಾಂಶದಲ್ಲಿ ಹೆಚ್ಚು ನಿಖರತೆಯನ್ನು ನೀಡಲು ಪ್ರಯತ್ನಿಸಿ. ಶಾಲಾ ಕಾಲೇಜು ಹಂತದ ವಿದ್ಯಾರ್ಥಿಗಳಲ್ಲಿ, ವೃತ್ತಿಪರ ಶಿಕ್ಷಣ ಎಂದರೆ, ಕೇವಲ ಉದ್ಯೋಗ ಪಡೆಯುವ ಮಾರ್ಗವೆಂಬ ಕಲ್ಪನೆಯಲ್ಲಿದ್ದಾರೆ. ಅದರೇ ಸಂಶೋಧನಾ ಪ್ರಕಿಯೆಗೆ ಸಿಗುವ ಫೆಲೋಶಿಪ್ ಮತ್ತು ಸೌಲಭ್ಯಗಳನ್ನು ತಾಳೆ ಹಾಕಿದಾಗ, ಅದು ಉದ್ಯೋಗದ ಪ್ಯಾಕೇಜ್ ಗಿಂತ ಉತ್ತಮವಾಗಿರುವುದು ಗಮನಾರ್ಹ ವಿಚಾರವಾಗಿದೆ. ಹಾಗಾಗಿ ಉದ್ಯೋಗಕ್ಕಿಂತ ಮೊದಲು ಪದವಿ ಪಡೆದ ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚು ಪ್ರಾಧಾನ್ಯತೆ ನೀಡುವುದು ಉತ್ತಮ ಎಂದು ಹೇಳಿದರು.ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಸಂಶೋಧಕರು ಯಾವಾಗಲೂ ಸಾಮಾಜಿಕವಾಗಿ ಜಾಗೃತರಾಗಿರಬೇಕು, ಅಧ್ಯಯನಶೀಲರಾಗಿರಬೇಕು. ಇದರಿಂದ ಸಮಾಜದಲ್ಲಿರುವ ಅನೇಕ ಸಮಸ್ಯೆಗಳನ್ನು ನಾವೀನ್ಯತೆಯ ಮೂಲಕ ಪರಿಹರಿಸುವ ಅವಕಾಶ ಲಭ್ಯವಾಗಲಿದೆ. ವಿದ್ಯಾಸಂಸ್ಥೆಗಳು ಸಂಶೋಧಕರಿಗೆ ಸಂಪೂರ್ಣ ಸ್ವಾಯತ್ತತೆ ನೀಡಬೇಕು ಎಂದರು.

ಭಾರತದಲ್ಲಿ ಯುವ ಜನರ ಸಂಖ್ಯೆ ಅಧಿಕವಿದ್ದರು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುತ್ತಿಲ್ಲ. ಮಾನವ ಸಂಪತ್ತಿನಲ್ಲಿ ಶ್ರೀಮಂತರಿದ್ದರು, ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಗೆ ಬರಲು ಇಂದಿಗೂ ಹೋರಾಟ ಮಾಡುತ್ತಿದ್ದೇವೆ. ಹೆಚ್ಚು ಮೌಲ್ಯದ ತಂತ್ರಜ್ಞಾನವನ್ನು ವಿದೇಶದಿಂದ ಅಮದು ಮಾಡಿಕೊಳ್ಳುತ್ತಿದ್ದೇವೆ. ಅದು ನಮ್ಮ ಅಭಿವೃದ್ಧಿಯ ಕೊರತೆಯ ಲಕ್ಷಣ ಎಂದರು.

ಕೋವಿಡ್ ಸಮಯದಲ್ಲಿ ಸೆಮಿಕಂಡಕ್ಟರ್ ಚಿಪ್’ಗಳ ಕೊರತೆಯಿಂದಾಗಿ ಕಾರು ಉತ್ಪಾದನೆ ಸೇರಿದಂತೆ ಅನೇಕ ಕೈಗಾರಿಕೆಗಳು ಸ್ಥಗಿತಗೊಂಡಿದ್ದವು. ಏಕೆಂದರೆ ಈ ಉದ್ಯಮವು ಕೆಲ ರಾಷ್ಟ್ರಗಳಲ್ಲಿ ಮಾತ್ರ ಇದೆ. ಥೈಲ್ಯಾಂಡ್ ನಂತಹ ಸಣ್ಣ ರಾಷ್ಟ್ರದಲ್ಲಿ 90% ಸೆಮಿಕಂಡಕ್ಟರ್ ಉದ್ಯಮ ಇದೆ. ಆವಿಷ್ಕಾರ ಮತ್ತು ನವೋತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಇಂತಹ ವಾಸ್ತವತೆಯ ಅರಿವಿನಿಂದ ಪ್ರೇರಣೆ ಪಡೆಯಿರಿ. ಶಾಲಾ ಹಂತದಲ್ಲಿಯೇ ಮುಂದುವರೆದ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಮತ್ತು ಸಂಶೋಧನಾ ಅರಿವು ನೀಡುವಂತಹ ಪೂರಕ ವೇದಿಕೆಗಳು ನಿರ್ಮಾಣವಾಗಲಿ ಎಂದು ಆಶಿಸಿದರು..ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ. ವಿಜಯ ಕುಮಾರ್ ಮಾತನಾಡಿ, ಕಾಲೇಜಿನಲ್ಲಿ ವಿವಿಧ ವಿಷಯಗಳ 10 ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 100 ಕ್ಕೂ ಹೆಚ್ಚು ಸಂಶೋಧನಾರ್ಥಿಗಳು ನಾವೀನ್ಯತೆಯ ಹಿನ್ನೆಲೆಯಲ್ಲಿ ಸಂಶೋಧನಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಂಶೋಧನಾ ಪ್ರಕ್ರಿಯೆಗಳು ವಿದ್ಯಾಸಂಸ್ಥೆಯ ಕಳಸ ಪ್ರಾಯವಿದ್ದಂತೆ. ಕೇಂದ್ರ ಸರ್ಕಾರ ಒನ್ ಡೇಟಾ, ಒನ್ ನೇಷನ್ ಅಡಿಯಲ್ಲಿ ದೇಶದ ಪ್ರಗತಿಗಾಗಿ ಮಾಹಿತಿಯ ಏಕೀಕರಣ ಕಾರ್ಯ ಮಾಡುತ್ತಿದ್ದು, ಸಂಶೋಧಕರಿಗೆ ಮತ್ತು ಸ್ಟಾರ್ಟ್ ಅಪ್’ಗಳಿಗೆ ವಿಶ್ವಾಸಾರ್ಹ ಮತ್ತು ನೀತಿ ಆಧಾರಿತ ಸಂಶೋಧನೆಗೆ ಸಹಾಯವಾಗಲಿದೆ ಎಂದು ಹೇಳಿದರು.

ಕಾಲೇಜಿನ ಸಂಶೋಧನಾ ಡೀನ್ ಡಾ.ಎಸ್.ವಿ. ಸತ್ಯನಾರಾಯಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಕಾರ್ಯಾಗಾರದ ಸಂಯೋಜಕ ಡಾ.ಎಚ್.ಪಿ. ಸಚಿನ್ ಉಪಸ್ಥಿತರಿದ್ದರು. ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸುಭದ್ರ ಪ್ರಾರ್ಥಿಸಿ, ಡಾ.ವಿ. ವಿಕ್ರಮ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: JNNCEKannada News WebsiteLatest News KannadaLocal NewsMalnad NewsShimogaShivamoggaShivamogga Newsಜೆಎನ್’ಎನ್’ಸಿಇಟಾಟಾ ಇನ್ಸ್ಟಿಟ್ಯೂಟ್ಶಿವಮೊಗ್ಗ
Share196Tweet123Send
Previous Post

ಮಂಗಳೂರಿನಲ್ಲಿ ಮಲಯಾಳಂ ನಟ ಜಯಕೃಷ್ಣನ್ ಬಂಧನ | ಕಾರಣವೇನು?

Next Post

ಪುತ್ತೂರು | ಹೆಜ್ಜೇನು ದಾಳಿ | ಏಳು ವರ್ಷದ ಬಾಲಕಿ ಮೃತ | ಇನ್ನೋರ್ವ ವಿದ್ಯಾರ್ಥಿ ಗಂಭೀರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುತ್ತೂರು | ಹೆಜ್ಜೇನು ದಾಳಿ | ಏಳು ವರ್ಷದ ಬಾಲಕಿ ಮೃತ | ಇನ್ನೋರ್ವ ವಿದ್ಯಾರ್ಥಿ ಗಂಭೀರ

ಪುತ್ತೂರು | ಹೆಜ್ಜೇನು ದಾಳಿ | ಏಳು ವರ್ಷದ ಬಾಲಕಿ ಮೃತ | ಇನ್ನೋರ್ವ ವಿದ್ಯಾರ್ಥಿ ಗಂಭೀರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

April 14, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ – ನ್ಯೂ ಜಲ್ಪೈಗುರಿ ನಡುವೆ ವಿಶೇಷ ರೈಲು ಸೇವೆ

April 14, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Work in connection with Yard Remodelling at Channasandra Station Diversion of trains

April 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Summer Special Train Service Between Yesvantpur and New Jalpaiguri

April 14, 2026
SWR to run special trains for Good Friday, Easter rush

ಬೆಂಗಳೂರು – ರೂಪ್ಸಾ ನಡುವೆ ವಿಶೇಷ ರೈಲು ಸೇವೆ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL