ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ರಾಜ್ಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ಉದ್ಯೋಗಕ್ಕಾಗಿ ಎದುರು ನೋಡುತ್ತಿರುವ ಯುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದ್ದು, ಆದಷ್ಟು ಶೀಘ್ರ ಅರ್ಜಿ ಸಲ್ಲಿಸಿ.
ಅರ್ಹತಾ ವಿವರಗಳು ಇಂತಿವೆ:
ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ, 12 ನೇ, ಪದವಿ , ಬಿ.ಕಾಂ, ಬಿಇ ಅಥವಾ ಬಿಟೆಕ್ ಪೂರ್ಣಗೊಳಿಸಿರಬೇಕು.ಅಭ್ಯರ್ಥಿಗಳ ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್’ಸಿ/ಎಸ್’ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತಿದೆ ಎಂದು ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಿದೆ.
ಅರ್ಜಿ ಶುಲ್ಕ: 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ.750, ಎಸ್’ಸಿ/ಎಸ್’ಟಿ, ಮಾಜಿ ಸೇನಾ ಅಭ್ಯರ್ಥಿಗಳು 500 ರೂ. ಮತ್ತು PWD ಅಭ್ಯರ್ಥಿಗಳ 250 ರೂ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 10, 2025
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಂಪು ಲಿಂಕ್ ಮೇಲೆ ಕ್ಲಿಕ್ ಮಾಡಿವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್ಲೋಡ್ ಮಾಡಬೇಕು.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
ಬಹುಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ವಿನಂತಿ ಸಂಖ್ಯೆಯನ್ನು ಸೇವ್ ಮಾಡಿ ಇಟ್ಟುಕೊಳ್ಳಿ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿಯ ಅಧಿಕೃತ ಅಧಿಸೂಚನೆಗಾಗಿ ಈ ಕೆಂಪು ಲಿಂಕ್ ಕ್ಲಿಕ್ ಮಾಡಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post