ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿಶ್ವವಿದ್ಯಾಲಯದಲ್ಲಿ #Kuvempu University ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಎಂ ಸಿದ್ದರಾಮು ಇವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರ #Minister Madhu Bangarappa ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಂದಿದರು.
ಅವರು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ಇತ್ತೀಚಿಗೆ ನಿವೃತ್ತಿ ಹೊಂದಿದ್ದು ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್, ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ. ರಮೇಶ್ ಶಂಕರಘಟ್ಟ, ಮಹಿಳಾ ವಿಭಾಗದ ಅಧ್ಯಕ್ಷ ಶ್ವೇತಾ ಬಂಡಿ, ಪ್ರಮುಖರಾದ ಕಲಗೋಡು ರತ್ನಾಕರ್, ಜಿ.ಡಿ. ಮಂಜುನಾಥ್ ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post