ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಹನುಮನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ #AnjanadriHills ಅಭಿವೃದ್ಧಿಗಾಗಿ 1350 ಕೋಟಿ ರೂ. ಮೊತ್ತದ ಪ್ರಸ್ತಾವನೆಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಸಲ್ಲಿಸಲಾಗುವುದು. ಇದಕ್ಕಾಗಿ ಅನುಮೋದನೆ ನೀಡಿ ಎಂದು ಗಂಗಾವತಿ ಶಾಸಕ ಜಿ. ಜನಾರ್ಧನ ರೆಡ್ಡಿ #GJanardhanaReddy ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.
ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹನುಮನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ದೇಶದ ವಿವಿಧೆಡೆಯಿಂದ ಜನರು ಬರುತ್ತಾರೆ. ಇದರ ಅಭಿವೃದ್ಧಿಗಾಗಿ 1350 ಕೋಟಿ ರೂ. ಮೊತ್ತದ ಪ್ರಸ್ತಾವನೆಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಸಲ್ಲಿಸಲಾಗುವುದು. ಇದಕ್ಕಾಗಿ ಅನುಮೋದನೆ ನೀಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಅಂಜನಾದ್ರಿ ಬೆಟ್ಟವನ್ನು ಅಭಿವೃದ್ಧಿ ಮಾಡಬೇಕು ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.
ಸಚಿವರಾದ ನಿರ್ಮಲಾ ಸೀತಾರಾಮನ್ ರವರು ನಮ್ಮ ದೇಶದಲ್ಲಿ ಸತತವಾಗಿ 8 ಬಾರಿ ಬಜೆಟ್ ಮಂಡಿಸಿ, ಇತಿಹಾಸ ಸೃಷ್ಟಿಸಿರುವ ನಮ್ಮ ದೇಶದ ಹೆಮ್ಮೆಯ ಮಹಿಳೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಜಿಯವರ ಕನಸನ್ನು ನನಸಾಗಿಸುವ ದಿಶೇಯಲ್ಲಿ ಮತ್ತು ದೇಶದ ಆರ್ಥಿಕತೆಗೆ ಶಕ್ತಿಯಾಗಿ ಅವರು ಶ್ರಮಿಸುತ್ತಿದ್ದಾರೆ ಎಂದರು.
ಇಂದು ಇಡೀ ಕಲ್ಯಾಣ ಕರ್ನಾಟಕ ಭಾಗಕ್ಕೆ ಹಬ್ಬದ ದಿನವಾಗಿದ್ದು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಸೇರಿ ಏಳು ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರು ಈ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿದೆ. ವಿಶೇಷವಾಗಿ ಇದರ ಭಾಗವಾಗಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಅತ್ಯಂತ ಹಿಂದುಳಿದ ಭಾಗವಾದ ಮೆತಗಲ್ಲ ಗ್ರಾಮದಲ್ಲಿ ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವು ಉದ್ಘಾಟನೆಯಾಗಿದೆ ಎಂದರು.
ರೈತರ ಹಿತಕ್ಕಾಗಿ, ರೈತರ ಆದಾಯವನ್ನು ಹೆಚ್ಚಿಸುವ ಸಲುವಾಗಿ ಈ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವು ಸಹಕಾರಿಯಾಗಲಿದೆ. ಇದರಿಂದ ರೈತರ ಕೌಶಲ್ಯಾಭಿವೃದ್ಧಿ, ಸಬಲೀಕರಣ, ಉದ್ಯೋಗ ಸೃಷ್ಟಿ ಮತ್ತು ಮಹಿಳಾ ಸಬಲೀಕರಣವಾಗಲಿದೆ. ಜಿಲ್ಲೆಯಲ್ಲಿ ಅವಕಾಶವಿರುವ ಕಡೆ ಇಂತಹ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post