ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ #Census ನಾವು ಭಾಗವಹಿಸುವುದಿಲ್ಲ ಎಂದು ಇನ್ಫೋಸಿಸ್ #Infosys ಸಂಸ್ಥಾಪಕ ನಾರಾಯಣ ಮೂರ್ತಿ #Narayana Murthy ದಂಪತಿ ಹೇಳಿದ್ದಾರೆ.
ಈ ಕುರಿತಂತೆ ನಾವು ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಕ್ಟೋಬರ್ 10 ರಂದು ಸುಧಾಮೂರ್ತಿ #Sudha Murthy ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.
ಕೊಟ್ಟ ಕಾರಣವೇನು?
ಇನ್ನು, ತಾವು ಈ ಸಮೀಕ್ಷೆಯಲ್ಲಿ ಭಾಗವಹಿಸುದಿಲ್ಲ ಎಂದು ಸ್ಪಷ್ಟಪಡಿಸಿರುವ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ, ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಮ್ಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇನೆ ಎಂದು ಈ ಮೂಲಕ ದೃಢೀಕರಿಸುತ್ತೇವೆ ಎಂದು ದಂಪತಿ ತಿಳಿಸಿದ್ದಾಗಿ ವರದಿಯಾಗಿದೆ.
ಬೆಂಗಳೂರಿನ ಜಯನಗರದಲ್ಲಿ ಸುಧಾ ಮೂರ್ತಿ ಅವರ ನಿವಾಸವಿದ್ದು, ಇಬ್ಬರೂ ಕರ್ನಾಟಕದ ನಿವಾಸಿಗಳಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಮತ್ತು ಗಣತಿದಾರರು ಸಾರ್ವಜನಿಕರಿಂದ ಉತ್ತರಗಳನ್ನು ಒತ್ತಾಯಿಸುವಂತಿಲ್ಲ ಎಂದು ತೀರ್ಪು ನೀಡಿರುವುದರಿಂದ ದಂಪತಿಗಳು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post