ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಎನ್‌ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ವತಿಯಿಂದ ಅ.25 ಮತ್ತು 26 ರಂದು ಎರಡು ದಿನಗಳ ಕಾಲ ವಿದ್ಯಾರ್ಥಿಗಳಿಗಾಗಿ ರೋವರ್ಸ್ ಮತ್ತು ರೇಂಜರ್ಸ್ ಅಹೋರಾತ್ರಿ ಶಿಬಿರವನ್ನು ಏರ್ಪಡಿಸಲಾಗಿದೆ.
ಅ.25 ರ ಬೆಳಗ್ಗೆ 10.00 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ ಉದ್ಘಾಟಿಸಲಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಶಕುಂತಲ ಚಂದ್ರಶೇಖರ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕದ ರೋವರ್ಸ್ ಜಿಲ್ಲಾ ಆಯುಕ್ತರಾದ ಕೆ.ರವಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  
 
	    	





 Loading ...
 Loading ... 
							



 
                
Discussion about this post