ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಬೆಳಿಗ್ಗೆ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 11ರ ಬಸವನಗುಡಿ ಬಡಾವಣೆ ಹಾಗೂ ವಾರ್ಡ್ ಸಂಖ್ಯೆ 18ರ 60 ಅಡಿ ರಸ್ತೆಯ ಬಡಾವಣೆಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರು ಭೇಟಿ ನೀಡಿದರು.
ಭೇಟಿಯ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರ ದೈನಂದಿನ ಜೀವನದ ಮೂಲಭೂತ ಸೌಕರ್ಯಗಳು ಮತ್ತು ಪ್ರಮುಖ ಸಮಸ್ಯೆಗಳನ್ನು ಕೂಲಂಕಷವಾಗಿ ಆಲಿಸಿದರು.
ಸಾರ್ವಜನಿಕರಿಂದ ಸ್ವೀಕರಿಸಲಾದ ಎಲ್ಲಾ ಮನವಿ ಮತ್ತು ಸಮಸ್ಯೆಗಳನ್ನು ಶೀಘ್ರವಾಗಿ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















