ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಇಲ್ಲಿನ ಖಾಸಗಿ ಹೋಂ ಸ್ಟೇವೊಂದರ ಬಾತ್ ರೂಂನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತ ಯುವತಿಯನ್ನು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೇವಾಲಾಪುರ ಗ್ರಾಮದ ರಂಜಿತಾ (27) ಎಂದು ಗುರುತಿಸಲಾಗಿದೆ.
ಇಲ್ಲಿನ ಹೋಂ ಸ್ಟೇ ಒಂದರ ಸ್ನಾನಗೃಹದಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಸ್ನಾನಕ್ಕೆಂದು ತೆರಳಿದಾಗ ಕುಸಿದು ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ಬೆಳಗ್ಗೆ ರೇಖಾ ಸ್ನಾನ ಮಾಡಿ ಬಂದ ನಂತರ ರಂಜಿತಾ ಸ್ನಾನಕ್ಕೆ ತೆರಳಿದ್ದರು. ತುಂಬಾ ಹೊತ್ತಾದರೂ ಅವರು ಹೊರ ಬಾರದಿದ್ದಾಗ ಮತ್ತು ನಲ್ಲಿಯ ನೀರು ಹರಿಯುವ ಶಬ್ದ ನಿರಂತರವಾಗಿ ಕೇಳುತ್ತಿದ್ದಾಗ ರೇಖಾ ಅವರು ಬಾಗಿಲು ಬಡಿದಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಕಿಟಕಿಯಿಂದ ನೋಡಿದಾಗ ರಂಜಿತಾ ಸ್ನಾನಗೃಹದಲ್ಲಿ ಕುಸಿದು ಬಿದ್ದಿರುವುದು ಕಂಡುಬಂದಿದೆ.
ತಕ್ಷಣ ಹೋಂ ಸ್ಟೇ ಸಿಬ್ಬಂದಿಗೆ ಮಾಹಿತಿ ನೀಡಿ ಬಾಗಿಲು ಒಡೆದು ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಂಜಿತಾರನ್ನು ಮೂಡಿಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಯುವತಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಯುವತಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದಾ? ಅಥವಾ ಬೇರೇನು ಕಾರಣ ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಗೊತ್ತಾಗಬೇಕಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post