No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಕಲಾರಸಿಕರ ಮನಸೂರೆಗೊಂಡ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಸಂಗೀತ-ನೃತ್ಯ ಸಂಭ್ರಮ

ಕಲಾಕ್ಷೇತ್ರಕ್ಕೆ ದೀಪಕ್-ಪ್ರೀತಿಕಲಾ ಕುಟುಂಬಸ್ಥರ ಕೊಡುಗೆ ಅಪಾರ: ಈಶ್ವರ್ ಬೆಡೆಕರ್ ಪ್ರಶಂಸೆ

kalpa News by kalpa News
October 27, 2025
in ದಕ್ಷಿಣ ಕನ್ನಡ
0
ಕಲಾರಸಿಕರ ಮನಸೂರೆಗೊಂಡ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಸಂಗೀತ-ನೃತ್ಯ ಸಂಭ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪುತ್ತೂರು  |

ಇಲ್ಲಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ 29 ನೇ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆದಿದ್ದು, ಕಾರ್ಯಕ್ರಮಗಳು ಕಲಾರಸಿಕರ ಮನಸೂರೆಗೊಂಡವು.

ಸಂಗೀತ-ನೃತ್ಯೋತ್ಸವ 2025 ಎಂಬ ಶೀರ್ಷಿಕೆಯಡಿಯಲ್ಲಿ ನಗರದ ಜೈನ್ ಭವನದಲ್ಲಿ ನಡೆದ ಕಾರ್ಯಕ್ರಮ ಸಂಗೀತ ಹಾಗೂ ನೃತ್ಯ ಪ್ರಕಾರಗಳ ವೈಭವವನ್ನು ತೆರೆದಿಟ್ಟಿತು.

ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಬ್ಯಾಂಕ್ ಉದ್ಯೋಗಿ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಈಶ್ವರ್ ಬೆಡೆಕರ್, ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಸಂಸ್ಥೆಯ ಸಂಸ್ಥಾಪಕರಾದ ಭವಾನಿಶಂಕರ ರಾಯರು ತಮ್ಮ ಮಕ್ಕಳಿಗೆ ಚಿಕ್ಕಂದಿನಿಂದಲೇ ಅಭ್ಯಾಸ ಮಾಡಿಸುತ್ತಿದ್ದರು. ಅವರ ಮಕ್ಕಳು ಇಂದಿಗೂ ಅವಿರತವಾಗಿ ಕಲಾ ಸೇವೆ ಮಾಡುತ್ತಾ ಬರುತ್ತಿರುವುದು ಸಂತೋಷದ ವಿಚಾರ ಎಂದರು.

ದೀಪಕ್ ಅವರ ತಂದೆ ಎಂತಹುದ್ದೇ ಪರಿಸ್ಥಿತಿಯಲ್ಲೂ ಸಹ ತಮ್ಮ ಮಕ್ಕಳಿಗೆ ಸಂಗೀತ ಹಾಗೂ ನೃತ್ಯ ಅಭ್ಯಾಸವನ್ನು ತಪ್ಪದೇ ಮಾಡಿಸಿದ್ದು, ಇವರು ಚಿಕ್ಕಂದಿನಿಂದಲೇ ಆರಂಭಿಸಿ ಇಂದಿನವರೆಗೂ ನಿರಂತರವಾಗಿ ಕಲಾಸೇವೆ ಮಾಡುತ್ತಿರುವುದು ಮಾದರಿಯಾದುದು ಎಂದು ಶ್ಲಾಘಿಸಿದರು.
ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಪ್ರತಿ ವರ್ಷವೂ ಸಹ ಇಂತಹ ಅರ್ಥಪೂರ್ಣ ಕಾರ್ಯಕ್ರಮ ಆಚರಿಸಿಕೊಂಡು ಬರುತ್ತಿರುವುದು ಸಂತೋಷದ ವಿಚಾರ. ಹಿಂದೆ ಪುತ್ತೂರು ನರಸಿಂಹ ನಾಯಕ್ ಅವರಿಂದ ನಮ್ಮ ಊರು ರಾಜ್ಯದಲ್ಲೇ ಹೆಸರುವಾಸಿಯಾಗಿತ್ತು. ಈಗ, ದೀಪಕ್ ಅವರ ಕುಟುಂಬಸ್ಥರು ಅದೇ ರೀತಿಯಲ್ಲಿ ಪುತ್ತೂರಿನ ಹೆಸರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯತ್ತಾರೆ ಎಂಬ ಭರವಸೆ ನಮಗಿದೆ ಎಂದರು.

ಸಮಾಜಕ್ಕೆ ಉತ್ತಮ, ಸಂಸ್ಕಾರಯುತ ಜನಾಂಗವನ್ನು ಕೊಡಬೇಕು ಎಂಬ ಆಶಯದೊಂದಿಗೆ ದೀಪಕ್, ಪ್ರೀತಿಕಲಾ ಹಾಗೂ ಕುಟುಂಬಸ್ಥರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇಂತಹ ಕಾರ್ಯಗಳು ಮುಂದುವರೆಯಬೇಕಿದ್ದು, ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಗುರುಗಳಾದ ದೀಪಕ್ ಅವರು ಮಾತನಾಡಿ, ಪುತ್ತೂರಿನ ಮಣ್ಣಿನ ಶಕ್ತಿಯಿಂದಾಗಿ ನಾವು ಇಂತಹ ಕಲಾಸೇವೆ ಮಾಡಲು ಸಾಧ್ಯವಾಯಿತು. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಮಾಡುವ ಯೋಚನೆಯಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಕೋರಿದರು.ಕಲಾ ಸೇವೆಯೊಟ್ಟಿಗೆ ಸಾಮಾಜಿಕ ಕಳಕಳಿಯ ಭಾಗವಾಗಿ ಹಲವು ಕಡೆಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಮಾಡಲಾಗಿದೆ. ಪ್ರಮುಖವಾಗಿ ಮಹಾಲಿಂಗೇಶ್ವರ ದೇವಾಲಯದ ನಾಗವನ ಪ್ರದೇಶ, ಹೆಜ್ಜೆಗಿರಿ ಹಾಗೂ ಕೆಮ್ಮಿಂಜೆ ದೇವಾಲಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಹಾಗೂ ಕಸವನ್ನು ಹೆಕ್ಕುವ ಕಾರ್ಯ ಮಾಡಲಾಗಿದೆ ಎಂದು ತಿಳಿಸಿದೆ.

ನಮ್ಮ ಪರಿಸರ ಹಾಗೂ ಊರನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ, ನಮ್ಮ ಪರಿಸರ, ನಮ್ಮ ಸಾರ್ವಜನಿಕ ಆಸ್ತಿಯ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಪ್ರತಿಯೊಬ್ಬರೂ ಸಹ ಸಹಕರಿಸಬೇಕು. ಇಂತಹ ಮನೋಭಾವನೆಯನ್ನು ಪ್ರಮುಖವಾಗಿ ಮಕ್ಕಳಲ್ಲಿ ಬೆಳೆಸಬೇಕು ಎಂದು ಕರೆ ನೀಡಿದರು.
ಅಭ್ಯಾಗತರಾಗಿ ಪಾಲ್ಗೊಂಡಿದ್ದ ಯೇಳ್ತಿಮಾರ್ ಟ್ರೇಡರ್ಸ್ ಹಾಗೂ ಇಂಡಸ್ಟ್ರೀಸ್ ಮಾಲೀಕರಾರದ ವಿಜಯಲಕ್ಷ್ಮೀ ಶೆಣೈ ಅವರು ಮಾತನಾಡಿದರು.

ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಗೆ ಇತ್ತೀಚೆಗಷ್ಟೇ ಸೇರಿದ ಪುಟ್ಟ ಮಕ್ಕಳಾದಿಯಾಗಿ, ಇಲ್ಲೇ ಕಲಿತು ವಿದೂಷಿಗಳಾಗಿ ರಾಜ್ಯದ ಹಲವು ಕಡೆಗಳಲ್ಲಿ ಕಲಾ ಸೇವೆ ಮಾಡುತ್ತಿರುವ ಶಿಷ್ಯರೂ ಸಹ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಆರಂಭದಲ್ಲಿ ಸಂಗೀತ ಕಾರ್ಯಕ್ರಮ ಹಾಗೂ ನಂತರ ಭರತನಾಟ್ಯ ನೃತ್ಯ ಪ್ರದರ್ಶನಗಳು ನಡೆಯಿತು. ಅದ್ದೂರಿಯಾಗಿ ನಡೆದ ಕಾರ್ಯಕ್ರಮ ಹಾಗೂ ಎಲ್ಲ ವಯೋಮಾನದ ಕಲಾವಿದರ ಪ್ರದರ್ಶನ ಪ್ರೇಕ್ಷಕರನ್ನು ಮಂತ್ರಮುಗ್ದಗೊಳಿಸಿತು.

ನಟುವಾಂಗದಲ್ಲಿ ಗುರುಗಳಾದ ಬಿ. ದೀಪಕ್ ಕುಮಾರ್, ಹಾಡುಗಾರಿಕೆಯಲ್ಲಿ ವಿದ್ವಾನ್ ಪ್ರೀತಿಕಲಾ, ಮೃದಂಗದಲ್ಲಿ ಉಡುಪಿಯ ವಿದ್ವಾನ್ ಬಾಲಚಂದ್ರ ಭಾಗವತ್, ಕೊಳಲಿನಲ್ಲಿ ವಿದ್ವಾನ್ ರಾಜಗೋಪಾಲನ್ ಕಾಇಂಗಾಡ್, ರಿದಂ ಪ್ಯಾಡ್’ನಲ್ಲಿ ಸುಹಾಸ್ ಹೆಬ್ಬಾರ್ ಹಾಗೂ ಪಿಟೀಲಿನಲ್ಲಿ ಮಂಗಳೂರಿನ ಕು.ಧನುಶ್ರೀ ಶಬರಾಯ ಅವರುಗಳು ನಿರ್ವಹಿಸಿದರು.

ಇನ್ನು, ವಿಘ್ನೇಶ್ ವಿಶ್ವಕರ್ಮ ಅವರು ಅತ್ಯುತ್ತಮವಾಗಿ ವರ್ಣಾಲಂಕಾರ ಮಾಡಿದ್ದು, ಶ್ರೀ ಮೂಕಾಂಬಿಕಾ ಕಾಸ್ಟ್ಯೂಮ್ಸ್, ಭಾವನಾ ಕಲಾ ಆರ್ಟ್ಸ್ ಹಾಗೂ ವಿಶ್ವಕಲಾ ಆರ್ಟ್ಸ್ ಜಂಟಿಯಾಗಿ ವಸ್ತ್ರಾಲಂಕಾರ ಹಾಗೂ ಮಂಗಳೂರಿನ ದೇವ್ ಪ್ರೊ ಸೌಂಡ್ಸ್ ಅವರು ಧ್ವನಿ ಬೆಳಕು ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BharatanatyamCarnatic musicKannada News WebsiteLatest News KannadaMahalingeshwara TemplePutturSri Mookambika Cultural Academyನೃತ್ಯ ಪ್ರಕಾರನೃತ್ಯೋತ್ಸವಪುತ್ತೂರುಶ್ರೀ ಮಹಾಲಿಂಗೇಶ್ವರ ದೇವಸ್ಥಾನಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಸಂಗೀತ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಕುರಿತು ಮಹತ್ವದ ಅಪ್ಡೇಟ್ ಇಲ್ಲಿದೆ

Next Post

ಅಯ್ಯೋ ಕಂದಾ! ಆಟ ಆಡುತ್ತಿದ್ದಾಗ ಕಾರು ಡಿಕ್ಕಿ | ಉಸಿರು ಕೈಚೆಲ್ಲಿದ 2 ವರ್ಷದ ಮಗು

kalpa News

kalpa News

Next Post
ಶಿವಮೊಗ್ಗದಲ್ಲಿ ಭೀಕರ ಅಪಘಾತ | MBBS ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು | ಹೇಗಾಯ್ತು ಘಟನೆ?

ಅಯ್ಯೋ ಕಂದಾ! ಆಟ ಆಡುತ್ತಿದ್ದಾಗ ಕಾರು ಡಿಕ್ಕಿ | ಉಸಿರು ಕೈಚೆಲ್ಲಿದ 2 ವರ್ಷದ ಮಗು

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL