ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಈಗಾಗಲೇ ವಿಶ್ವದಾದ್ಯಂತ ಹಲವು ರಾಷ್ಟ್ರಗಳಲ್ಲಿ ಅಬ್ಬರಿಸುತ್ತಿರುವ ಕಾಂತಾರ ಚಾಪ್ಟರ್ 1 #Kantara Chapter-1 ಚಿತ್ರ ಒಟಿಟಿಯಲ್ಲಿ ಬಿಡುಗಡೆ ಯಾವಾಗ ಎಂಬ ನಿರೀಕ್ಷೆಗೆ ಉತ್ತರ ಸಿಕ್ಕಿದೆ.
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ #Rishab Shetty ನಿರ್ದೇಶಿಸಿ, ನಟಿಸಿರುವ ಬ್ಲಾಕ್ ಬಸ್ಟರ್ ಚಿತ್ರ ಕಾಂತಾರ ಚಾಪ್ಟರ್ 1 ಇದೇ ಅಕ್ಟೋಬರ್ 31ರಂದು ಅಮೇಜಾನ್ ಪ್ರೈಮ್’ನಲ್ಲಿ ಬಿಡುಗಡೆಯಾಗಲಿದೆ.

ಈ ಚಿತ್ರ ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡುಗಡೆ ಮಾಡಲಾಗುವುದು ಎಂದು ಅಮೆಜಾನ್ ಪ್ರೈಮ್ ಅಧಿಕೃತವಾಗಿ ತಿಳಿಸಿದೆ.
ಒಟಿಟಿ ಹಕ್ಕುಗಳನ್ನು ಅಮೇಜಾನ್ ಪ್ರೈಮ್ 125 ಕೋಟಿ ರೂ. ನೀಡಿ ಖರೀದಿಸಿದೆ ಎನ್ನಲಾಗುತ್ತಿದೆ.
ಕಾಂತಾರದ ಎಲ್ಲಾ ಭಾಷೆಗಳ ಒಟಿಟಿ ಹಕ್ಕುಗಳನ್ನು ಅಮೆಜಾನ್ ಪಡೆದುಕೊಂಡಿದ್ದರೂ ಹಿಂದಿ ಭಾಷೆಗೆ ಡಬ್ ಆಗಿರುವ ಸಿನಿಮಾ ರಿಲೀಸ್ ಆಗುತ್ತಿಲ್ಲ. ಉತ್ತರ ಭಾರತದ ಮಾರುಕಟ್ಟೆಯಲ್ಲಿ ಈಗಲೂ ಕಾಂತಾರ ಟಿಕೇಟ್’ಗಳು ಸೇಲ್ ಆಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಇಲ್ಲಿಯವರೆಗೆ ಬಾಕ್ಸ್ ಆಫೀಸ್’ನಲ್ಲಿ ಕಾಂತಾರ 809 ಕೋಟಿ ರೂ. ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಈ ಮೂಲಕ ಈ ವರ್ಷ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಾವಾ ಸಿನಿಮಾವನ್ನು ಮೀರಿಸಿದೆ. ಚಾವಾ ಸಿನಿಮಾ 807 ಕೋಟಿ ರೂ. ಕಲೆಕ್ಷನ್ ಮಾಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post