ಕಲ್ಪ ಮೀಡಿಯಾ ಹೌಸ್ | ಕುಕ್ಕೆ ಸುಬ್ರಹ್ಮಣ್ಯ |
ಕುಕ್ಕೆ ಸುಬ್ರಹ್ಮಣ್ಯದಲ್ಲಿ #Kukke Subramanya ನಡೆಯುತ್ತಿದ್ದ ಮದುವೆಗೆಂದು ಹೊರಟಿದ್ದ ಟಿಟಿ ವಾಹನವೊಂದು ಬಿಸಿಲೆ ಘಾಟ್ #Bisile Ghat ಕ್ರಾಸ್ ಬಳಿಯಲ್ಲಿ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.
ಘಟನೆ ಬಿಸಿಲೆ ಘಾಟ್ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್’ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸಿಲೆ ತಿರುವಿನಲ್ಲಿ ವಾಹನ ಇಪ್ಪತ್ತಕ್ಕೂ ಅಧಿಕ ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ.
ಟೆಂಪೋದಲ್ಲಿದ್ದ ಇಪ್ಪಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಹಲವರನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 11 ಮಂದಿಯನ್ನು ಪುತ್ತೂರಿನ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ 7 ಮಂದಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















