ಕಲ್ಪ ಮೀಡಿಯಾ ಹೌಸ್ | ಉಡುಪಿ |
ಶ್ರೀಕೃಷ್ಣ ಮಠದಲ್ಲಿ #Udupi Shri Krishna Mutt ನ.28ರಂದು ನಡೆಯಲಿರುವ ಕೋಟಿ ಗೀತಾ ಲೇಖನ ಯಜ್ಞೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ಪಾಲ್ಗೊಳ್ಳಲಿದ್ದಾರೆ.
ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ಅಂಗವಾಗಿ ಕೋಟಿ ಗೀತಾ ಲೇಖನ ಯಜ್ಞವನ್ನು ಹಮ್ಮಿಕೊಂಡಿದ್ದು, ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ದೇಶದಾದ್ಯಂತ ಸಾರ್ವಜನಿಕರಿಂದ ಮೊದಲ್ಗೊಂಡು, ಸೆಲೆಬ್ರಟಿಗಳವರೆಗೂ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ.

ಇನ್ನು, ಪುತ್ತಿಗೆ ಶ್ರೀಪಾದರ ಕೋಟಿ ಗೀತಾ ಲೇಖನ ಯಜ್ಞವನ್ನು ಪ್ರಧಾನಿ ಮೋದಿ ಅವರು ಪ್ರಶಂಸಿಸಿದ್ದರು. ಅದರಲ್ಲೂ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನಾ ಪತ್ರವನ್ನೂ ರವಾನಿಸಿದ್ದರು.
ಪುತ್ತಿಗೆ ಶ್ರೀಪಾದರ ತೃತೀಯ ಪರ್ಯಾಯದ ಸಂದರ್ಭದಲ್ಲಿಯೂ ನರೇಂದ್ರ ಮೋದಿ ಅವರು ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ್ದರು. ಆ ಸಮಯದಲ್ಲಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಈಗ ಪ್ರಧಾನಿಯಾಗಿ ಶ್ರೀಮಠಕ್ಕೆ ಮೋದಿಯವರು ಆಗಮಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      
 
	    	





 Loading ...
 Loading ... 
							



 
                
Discussion about this post