ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲ್’ನಲ್ಲಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ #Suicide ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಭದ್ರಾವತಿ ತಾಲ್ಲೂಕಿನ ದೊಡ್ಡೇರಿ ಬಳಿಯ ಗಂಗೂರಿನ ನಿವಾಸಿ ವನಿಷಾ(21) ಎಂದು ಗುರುತಿಸಲಾಗಿದೆ.
ಹಾಸ್ಟೆಲ್’ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ.
ವನಿಷಾ ಅವರು ಶಿವಮೊಗ್ಗದ ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು.
ಇಂದು ಬೆಳಿಗ್ಗೆ ತಿಂಡಿ ಸೇವಿಸಿದ ವನಿಷಾ, ಹೊಟ್ಟೆ ನೋವಿನ ಕಾರಣ ನೀಡಿ ಕಾಲೇಜಿಗೆ ಹೋಗುವುದಿಲ್ಲ ಎಂದು ವಾರ್ಡನ್’ಗೆ ತಿಳಿಸಿದ್ದರು. ನಂತರ, ಬೆಳಿಗ್ಗೆ ಸುಮಾರು 10 ಗಂಟೆ ಸುಮಾರಿಗೆ ಹಾಸ್ಟೆಲ್’ನ ಟೆರೇಸ್ ಮೇಲೆ ತೆರಳಿದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಘಟನೆ ನಡೆದ ಸ್ಥಳಕ್ಕೆ ತೆರಳಿದ ಪೊಲೀಸರು, ಮೃತದೇಹವನ್ನು ಪರಿಶೀಲಿಸಿ, ಹೆಚ್ಚಿನ ಪ್ರಕ್ರಿಯೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















