ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ #Derogatory Statement Against Hindu Gods ನೀಡಿ ಬಾಲಕಿ ರೀಲ್ಸ್ ಪೋಸ್ಟ್ ಮಾಡಿದ್ದಕ್ಕೆ ಆಕೆಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ.
ಇನ್‌ಸ್ಟಾಗ್ರಾಮ್‌ನಲ್ಲಿ #Instagram ಫಾಲೋವರ್ಸ್ ಹೆಚ್ಚಾಗಲೆಂದು ಬಾಲಕಿ ಈ ಅಪರಾಧ ಎಸಗಿದ್ದಾಳೆ. ಸುಮಾರು ಒಂದು ನಿಮಿಷದ ಈ ವಿಡಿಯೋವನ್ನು ಅ.27 ರಂದು ಬಾಲಕಿ ಪೋಸ್ಟ್ ಮಾಡಿದ್ದಳು.
ವೀಡಿಯೋದಲ್ಲಿ ಆಕೆ ಹಿಂದೂ ದೇವರನ್ನು ಟೀಕಿಸಿದ್ದಾಳೆ. ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು. ಈಕೆ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ಅನೇಕ ಹಿಂದೂ ಸಂಘಟನೆಗಳು ಬಾಲಕಿ ಮತ್ತು ಆಕೆಯ ಕುಟುಂಬದ ವಿರುದ್ಧ ಪ್ರತಿಭಟನೆ ನಡೆಸಿ ದೂರು ದಾಖಲಿಸಿದ್ದವು.
ದೂರನ್ನು ಆಧರಿಸಿ ಪೊಲೀಸರು ಬಾಲಕಿ ಮತ್ತು ಪೋಷಕರನ್ನು ಬಂಧಿಸಿದ್ದಾರೆ. ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಿದ್ದಾರೆ. ಪ್ರಕರಣ ಸಂಬಂಧ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದು, ಆತನ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















