ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ಯಾಂಡಲ್’ವುಡ್ #Sandalwood ಹಿರಿಯ ಪೋಷಕ ನಟ ಹರೀಶ್ ರಾಯ್ #Harish Roy ವಿಧಿವಶರಾಗಿದ್ದಾರೆ.
ಕ್ಯಾನ್ಸರ್’ನಿಂದ #Cancer ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಇಬ್ಬರು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ.

ಕರಾವಳಿ ಮೂಲಕ ಹರೀಶ್ ರಾಯ್ ಅವರು 90ರ ದಶಕದ ಹಲವಾರು ಸಿನಿಮಾಗಳಲ್ಲಿ ವಿಲನ್ ಪಾತ್ರಗಳಲ್ಲಿ ಮಿಂಚಿದ್ದಾರೆ. ಅಸಲಿಗೆ ನಿಜ ಜೀವನದಲ್ಲಿಯೂ ಸಹ ಪ್ರಕರಣ ಒಂದರಲ್ಲಿ ಹರೀಶ್ ರಾಯ್ ಅವರು ಜೈಲು ಪಾಲಾಗಿದ್ದರು. ದರ್ಶನ್ ಜೈಲಿಗೆ ಹೋದ ಸಂದರ್ಭದಲ್ಲಿ ಹರೀಶ್ ರಾಯ್, ತಮ್ಮ ಜೈಲು ದಿನಗಳನ್ನು ನೆನಸಿಕೊಂಡು ಕಣ್ಣೀರು ಹಾಕಿದ್ದರು.
ಹರೀಶ್ ರಾಯ್ ಅವರು ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದರು. ಧೈರ್ಯ, ಅಂಡರ್ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುಗಿರ್ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್‌ವುಡ್ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್ 2 ನಲ್ಲಿ ಅಭಿನಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 












Discussion about this post