ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ #Keladi Shivappanayaka University ಇಂದಿನಿಂದ ಆರಂಭಗೊಂಡಿರುವ ಕೃಷಿ ಮೇಳದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಅರಿವು ಮತ್ತು ಸಲಹೆ ದೊರೆಯಲಿದೆ.
ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್. ಸಂತೋಷ್ ಪ್ರಕಟಣೆ ನೀಡಿದ್ದು, ಈ ಉಚಿತ ಕಾನೂನು ಸಲಹೆ ಮತ್ತು ಅರಿವು ಇಂದಿನಿಂದ ನ.10ರವರೆಗೂ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಕೃಷಿ ಮೇಳ 2025 ರಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಾರ್ವಜನಿಕರಿಗೆ ಉಚಿತವಾಗಿ ಕಾನೂನು ಸಲಹೆ ಮತ್ತು ಕಾನೂನು ಅರಿವನ್ನು ನೀಡುವ ದೃಷ್ಟಿಯಿಂದ ಕಾನೂನು ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಕಾನೂನು ಸಲಹಾ ಕೇಂದ್ರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್. ಸಂತೋಷ್ ಉದ್ಘಾಟಿಸಿದರು.
ಈ ಕಾನೂನು ಸಲಹಾ ಕೇಂದ್ರದಲ್ಲಿ ನಾಲ್ಕು ದಿನಗಳ ಕಾಲ ಪ್ರಾಧಿಕಾರದ ಪ್ಯಾನಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು ಹಾಗೂ ಸ್ಟೈಫೆಂಡ್ ವಕೀಲರು ಸಾರ್ವಜನಿಕರಿಗೆ ಕಾನೂನು ಸಲಹೆಯನ್ನು ಮತ್ತು ಕಾನೂನು ಅರಿವನ್ನು ನೀಡುವುದರ ಜೊತೆಗೆ ಕಾನೂನು ಸೇವಾ ಪ್ರಾಧಿಕಾರ ನೀಡುವಂತಹ ಸೇವೆಗಳ ಬಗ್ಗೆ ಜನರಲ್ಲಿ ಅರಿವನ್ನು ಮೂಡಿಸಲು ಪ್ರಾಧಿಕಾರದಿಂದ ನಿಯೋಜಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾನೂನು ಸಲಹಾ ಕೇಂದ್ರಕ್ಕೆ ಖುದ್ದಾಗಿ ಭೇಟಿಕೊಟ್ಟು ಕಾನೂನು ಸೇವಾ ಪ್ರಾಧಿಕಾರದ ಸೇವೆಗಳ ಬಗ್ಗೆ ಮತ್ತು ಕಾನೂನಿನ ಬಗ್ಗೆ ಅರಿವು ಪಡೆದುಕೊಳ್ಳುವುದರ ಜೊತೆಗೆ ತಮಗಿರುವಂತಹ ಕಾನೂನು ಸಮಸ್ಯೆಗಳ ಬಗ್ಗೆ ಸಲಹೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























