ಕಲ್ಪ ಮೀಡಿಯಾ ಹೌಸ್ | ಕಡಬ |
14 ವರ್ಷದ ಶಾಲಾ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಮೀಪದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಖಂಡಿಗ ಮನೆಯ ಗಗನ್(14) ಎಂದು ಗುರುತಿಸಲಾಗಿದೆ.
ಒಂಭತ್ತನೆ ತರಗತಿಯಲ್ಲಿ ಓದುತ್ತಿದ್ದ ಬಾಲಕ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.
ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















