ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಂದಿನ ವಿದ್ಯಾರ್ಥಿಗಳಿಗೆ ಅನ್ವೇಷಣೆಯಂತಹ ಕಾರ್ಯಕ್ರಮಗಳು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರಕಟಿಸಲು ವೇದಿಕೆಯಾಗುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ರಂಗಭೂಮಿ ಮತ್ತು ಚಲನಚಿತ್ರ ನಟ ತೆಲಿಕೆದ ತೆನಾಲಿ ಸುನಿಲ್ ನೆಲ್ಲಿಗುಡ್ಡೆ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪದವಿಪೂರ್ವ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ‘ಅನ್ವೇಷಣೆ 2025’ ಅದ್ದೂರಿಯಾಗಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಕೂಡಾ ಕೌಶಲ್ಯಗಳು ಇದ್ದೇ ಇರುತ್ತದೆ. ಆ ಕೌಶಲ್ಯಗಳಿಗೆ ಹೊರ ಹೊಮ್ಮಲು ಅವಕಾಶ ನೀಡಿದಾಗ ಆ ವಿದ್ಯಾರ್ಥಿ ಉನ್ನತ ಹಂತಕ್ಕೆ ಏರಲು ಸಾಧ್ಯ ಎಂದು ಹೇಳಿದರು.

ಸಂಸ್ಥೆಯ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರುಢಾಲ್ಫ್ ಕಿಶೋರ್ ಲೋಬೋ, ಸಂಸ್ಥೆಯ ಆಡಳಿತಾಧಿಕಾರಿ ಕಿರಣ್ ಕ್ರಾಸ್ತರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢ ಶಾಲಾ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಸುಂದರ ಪುರಾಣಿಕ ಸರ್ಕಾರಿ ಪ್ರೌಢ ಶಾಲೆ, ಪೆರ್ವಾಜೆ ಹಾಗೂ ಪದವಿ ಪೂರ್ವ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಡಾ. ಎನ್.ಎಸ್.ಎ.ಎಮ್ ಪದವಿ ಪೂರ್ವ ಕಾಲೇಜು, ನಿಟ್ಟೆ ಪಡೆದುಕೊಂಡಿತು. ಉಪನ್ಯಾಸಕಿ ಪಾವನ ಹಾಗೂ ದೀಪಕ್ ಕೆ ಇವರು ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿ ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆಗೈದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post