ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು ವತಿಯಿಂದ ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಪ್ರಶಸ್ತಿ ಸ್ಪರ್ಧೆಗೆ ಜಿಲ್ಲಾ ಮಟ್ಟದಿಂದ ಮಕ್ಕಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆಯ ವಿವಿಧ ಶಾಲೆಯ ಮಕ್ಕಳಿಗೆ ವಿವಿಧ ಪಠ್ಯೇತರ ಚಟುವಟಿಕೆಗಳಾದ ಸೃಜನಾತ್ಮಕ ಕಲೆ, ಬರವಣಿಗೆ, ಪ್ರದರ್ಶನ ಹಾಗೂ ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್. ಸಂತೋಷ್ ಸ್ಮರಣಿಕೆ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಿದರು.

ಸೃಜನಾತ್ಮ ಪ್ರದರ್ಶನ ಕಲೆ ಸ್ಪರ್ಧೆಯಲ್ಲಿ ಅನನ್ಯ ವಿದ್ಯಾಪೀಠದ ಗ್ಲೋರಿಯಾ ರಿಜಾರಿಯೋ ಪ್ರಥಮ, ಹೊಸನಗರ ವಿದ್ಯಾಭಾರತಿ ಶಾಲೆಯ ಆರ್ವಿ ಎಲ್.ಹೆಚ್ ದ್ವಿತೀಯ, ಗಾಜನೂರಿನ ಕರ್ನಾಟಕ ಪ್ರೌಢಶಾಲೆಯ ಅನುಷಾ ತೃತೀಯ ಸ್ಥಾನ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post