ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೀವಾವಧಿ ಶಿಕ್ಷೆಗೆ ಗುರಿಯಾಗಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಚಿಕ್ಕಮಗಳೂರಿನ ಖೈದಿಯೊಬ್ಬ ಮೃತನಾಗಿದ್ದಾನೆ.
ಮೃತ ಖೈದಿಯನ್ನು ಚಿಕ್ಕಮಗಳೂರು ಮೂಲದ ಕೆ.ಪಿ. ಬಾಬು ಎಂದು ಗುರುತಿಸಲಾಗಿದೆ.
ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ #Life imprisonment ಪ್ರಕಟಿಸಿತ್ತು. ಕಳೆದ ಆಗಸ್ಟ್ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು.
ಚಿಕ್ಕಮಗಳೂರು ಕಾರಾಗೃಹದಲ್ಲಿ ಇದ್ದಾಗಲೇ ಬಾಬು ಎಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











