ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಂಪುಕೋಟೆಯಲ್ಲಿ ನಡೆದ ಉಗ್ರರ ಬಾಂಬ್ ಸ್ಫೋಟ #Terrorist Bomb Blast ಘಟನೆ ಖಂಡಿಸಿ ಗೃಹಸಚಿವ ಅಮಿತ್ ಷಾರವರ #Home Minister Amith Shah ರಾಜೀನಾಮೆಗೆ ಒತ್ತಾಯಿಸಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಗೋಪಿವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಅಮಿತ್ ಷಾಗೆ ಬಳೆಗಳನ್ನು ಅಂಚೆ ಕಚೇರಿ ಮೂಲಕ ಕಳುಹಿಸಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಉಗ್ರರ ದಾಳಿಯಾಗುತ್ತಿದೆ. ಕಾಶ್ಮೀರದ ಕಹಿ ಘಟನೆ ಮರೆಯುವ ಮುನ್ನವೇ ದೇಶದ ರಾಜಧಾನಿ, ಶಕ್ತಿಕೇಂದ್ರ ನವದೆಹಲಿಯ ಕೆಂಪು ಕೋಟೆಯ ಕೂಗಳತೆಯ ದೂರದಲ್ಲಿ ಉಗ್ರರು ಬಾಂಬ್ ಸ್ಫೋಟಿಸಿ ಅಮಾಯಕ ನಾಗರೀಕರು ಪ್ರಾಣ ಕಳೆದುಕೊಂಡಿದ್ದಾರೆ.

ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದಂದಿನಿಂದಲೂ ಇಂತಹ ದಾಳಿಗಳು ಚುನಾವಣಾ ಸಂದರ್ಭದಲ್ಲೇ ನಡೆಯುತ್ತಿವೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪುಲ್ವಾಮಾ ದಾಳಿ ನಡೆದಿತ್ತು. ನಂತರ ಮಣಿಪುರದಲ್ಲಿ, ಇದೀಗ ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಈ ದಾಳಿ ನಡೆದಿದೆ. ಬಿಹಾರ ಚುನಾವಣೆಯಲ್ಲಿ ಎನ್.ಡಿ.ಎ.ಗೆ ಮುಖಭಂಗವಾಗುವುದು ಖಚಿತ ಎಂದು ಸಮೀಕ್ಷೆಗಳು ಹೇಳಿದ ಬೆನ್ನಲ್ಲೇ ನಿನ್ನೆಯ ದಾಳಿ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದರು.

ಈ ಸಂದರ್ಭದಲ್ಲಿ ಯುವ ನಾಯಕರಾದ ರಂಗೇಗೌಡರು, ಗಿರೀಶ್, ಮಧುಸೂದನ್, ಯುವ ಕಾಂಗ್ರೆಸ್ ನ ಶಿವಮೊಗ್ಗ ನಗರ ಅಧ್ಯಕ್ಷ ಚರಣ್ ಜಿ. ಶೆಟ್ಟಿ, ಗಿರೀಶ್, ಮಹಮ್ಮದ್ ಗೌಸ್, ಅಬ್ದುಲ್, ಆಕಾಶ್, ಅನಿಲ್, ಗೌತಮ್, ರವಿ, ಲಿಂಗರಾಜು, ಥೌಪಿಕ್ ನೂರಾರು ಯುವಕರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post