No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಸ್ಯೆಗಳನ್ನು ಗಮನಕ್ಕೆ ತಂದಾಗ ಮಾತ್ರ ಸುಧಾರಣೆ ಸಾಧ್ಯ: ಎಸ್‌ಪಿ ಮಿಥುನ್‍ಕುಮಾರ್

ನೆಹರೂ ರಸ್ತೆಯ ಸುಗಮ ಸಂಚಾರ ವ್ಯವಸ್ಥೆಗಾಗಿ ವರ್ತಕರ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 12, 2025
in ಶಿವಮೊಗ್ಗ
0
ಸಮಸ್ಯೆಗಳನ್ನು ಗಮನಕ್ಕೆ ತಂದಾಗ ಮಾತ್ರ ಸುಧಾರಣೆ ಸಾಧ್ಯ: ಎಸ್‌ಪಿ ಮಿಥುನ್‍ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಗರೀಕರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಾಗ ಮಾತ್ರ ಸುಧಾರಣೆ ಸಾಧ್ಯ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್ #SP Mithunkumar ಹೇಳಿದ್ದಾರೆ.

ಅವರು ಇಂದು ನಗರದ ಶುಭಂ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್, ಶಿವಮೊಗ್ಗ ಸಂಚಾರ ಪೊಲೀಸ್ ಹಾಗೂ ನೆಹರೂ ರಸ್ತೆಯ ವರ್ತಕರ ಸಂಘ ಜಂಟಿಯಾಗಿ ನೆಹರೂ ರಸ್ತೆಯ ಸುಗಮ ಸಂಚಾರ ವ್ಯವಸ್ಥೆಗೆ ಹಮ್ಮಿಕೊಂಡಿದ್ದ ವರ್ತಕರ ಸಭೆಯಲ್ಲಿ ಭಾಗವಹಿಸಿ ವರ್ತಕರ ಸಮಸ್ತ ದೂರುಗಳನ್ನು ಆಲಿಸಿ ಮಾತನಾಡಿದರು.
ನಗರದ ಅಮೀರ್ ಅಹ್ಮದ್ ವೃತ್ತದಿಂದ ಸೀನಪ್ಪಶೆಟ್ಟಿ ವೃತ್ತದವರೆಗೆ ಪ್ರತಿನಿತ್ಯ ಸಾವಿರಾರು ದ್ವಿಚಕ್ರ ಮತ್ತು ನೂರಾರು ನಾಲ್ಕು ಚಕ್ರವಾಹನಗಳ ನಿಲುಗಡೆಗೆ ಸಂಬಂಧಿಸಿದಂತೆ ಅನೇಕ ದೂರುಗಳು ಬರುತ್ತಿದ್ದು, ಎಲ್ಲರೂ ಕೈಜೋಡಿಸಿದರೆ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದರು.

ಈಗಾಗಲೇ ಒಟ್ಟು 21 ಕನ್ಸರ್‍ವೆನ್ಸಿಗಳನ್ನು ಪಾಲಿಕೆಯ ವತಿಯಿಂದ ಅಭಿವೃದ್ಧಿಪಡಿಸಲಾಗಿದೆ. ಅಲ್ಲಿ ಸಿಸಿ ಕ್ಯಾಮೇರಾ ಮತ್ತು ಬೆಳಕಿನ ವ್ಯವಸ್ಥೆ ಮಾಡಲು ಪಾಲಿಕೆ ಒಪ್ಪಿಕೊಂಡಿದ್ದು, ವರ್ತಕನ ಸಂಘದವರು ಕನ್ಸರ್‍ವೆನ್ಸಿ ನಿರ್ವಹಣೆಗೆ ಒಬ್ಬ ಸೆಕ್ಯೂರಿಟಿಯನ್ನು ನೇಮಿಸಿದರೆ ನೆಹರೂ ರಸ್ತೆಯ 150ಕ್ಕೂ ಹೆಚ್ಚಿನ ಅಂಗಡಿಗಳ ಮಾಲೀಕರು ಮತ್ತು ಸಿಬ್ಬಂದಿಗಳ ದ್ವಿಚಕ್ರ ವಾಹನಗಳನ್ನು ಕನ್ಸರ್‍ವೆನ್ಸಿಯಲ್ಲಿ ನಿಲುಗಡೆ ಮಾಡಿದರೆ ಸಮಸ್ಯೆ ಕಡಿಮೆಯಾಗುತ್ತದೆ. ಅಂಗಡಿ ಮುಂಭಾಗ ಕೆಲವು ವರ್ತಕರು ಫುಟ್‍ಬೋರ್ಡ್ ಜಾಲರಿ ಹಾಕುತ್ತಿದ್ದಾರೆ. ಇದರಿಂದ ದ್ವಿಚಕ್ರವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಡಿಮೆಯಾಗುತ್ತದೆ. ಇನ್ನು ಮುಂದೆ ನಿರ್ದಾಕ್ಷಿಣ್ಯವಾಗಿ ಅದನ್ನು ತೆರವುಗೊಳಿಸಲಾಗುವುದು.
ಹಾಸ್ಪೆಟಲ್ ಬಳಿಯ ಕನ್ಸರ್‍ವೆನ್ಸಿಗಳಲ್ಲಿ ಆಸ್ಪತ್ರೆಗೆ ಬರುವ ರೋಗಿಗಳ, ಸಂಬಂಧಿಕರ ಮತ್ತು ಸಿಬ್ಬಂದಿಗಳ ವಾಹನಗಳನ್ನು ನಿಲುಗಡೆಗೊಳಿಸಬೇಕು. ನೆಹರೂ ರಸ್ತೆಯಲ್ಲಿ ನಾಲ್ಕುಚಕ್ರ ಹಾಗೂ ದ್ವಿಚಕ್ರವಾಹನಗಳ ನಿಲುಗಡೆಗೆ ಪೇಯಿಟಿಂಗ್ ಮಾಡಿ ನಿಗಧಿಪಡಿಸಿದ ಜಾಗದಲ್ಲೇ ಅದನ್ನು ನಿಲ್ಲಿಸಬೇಕು. ಪ್ರತಿ ಅಂಗಡಿಗಳ ಮುಂದೆ ರಸ್ತೆ ಕಾಣುವಂತೆ ಸಿಸಿ ಕ್ಯಾಮೇರಾ ಅಳವಡಿಸಬೇಕು. ಆಗ ಯದ್ವಾತದ್ವಾ ನಿಲುಗಡೆ ಮಾಡುವ ವಾಹನಗಳು ಸಿಸಿ ಕ್ಯಾಮೇರಾದಲ್ಲಿ ರೆಕಾರ್ಡ್ ಆಗುತ್ತದೆ ಅವರಿಗೆ ದಂಡ ವಿಧಿಸಲಾಗುವುದು. ಸಧ್ಯಕ್ಕೆ ಸಂಚಾರ ವಿಭಾಗದಲ್ಲಿ ಇರುವ ಟೈಗರ್‍ವಾಹನದ ಅವಧಿ ಮೀರಿದ್ದು ಅದು ಬಳಸಲು ಅವಕಾಶ ಇಲ್ಲದೇ ಇರುವುದರಿಂದ ಟೈಗರ್ ವಾಹನ ಬರುವವರೆಗೆ ಸಮಸ್ಯೆ ಇದೆ. ಜನಪ್ರತಿನಿಧಿಗಳಿಗೆ ಈಗಾಗಲೇ ಗಮನಕ್ಕೆ ತರಲಾಗಿದೆ ಎಂದರು.

ಟ್ರಾಫಿಕ್ ಉಲ್ಲಂಘನೆ ಮತ್ತು ಬೇಕಾಬಿಟ್ಟಿ ವಾಹನ ನಿಲುಗಡೆ ಬಗ್ಗೆ ದೂರುಗಳಿದ್ದರೆ ಟೋಲ್ ಫ್ರೀ ನಂಬರ್ ಟ್ರಾಫಿಕ್ ಹೆಲ್ಪ್‍ಲೈನ್ 8277983404ಕ್ಕೆ ಸಂಪರ್ಕಿಸುವಂತೆ ತಿಳಿಸಿದರು.

ಸಾರ್ವಜನಿಕರು ಪೊಲೀಸರೊಂದಿಗೆ ಸಭ್ಯತೆಯಿಂದ ವರ್ತಿಸಬೇಕು. ಅವರನ್ನು ಗೌರವಿಸಬೇಕು. ಕಠಿಣ ಸಂದರ್ಭಗಳಲ್ಲೂ ಮಳೆ, ಬಿಸಲು ಲೆಕ್ಕಿಸದೆ ತಾಸುಗಟ್ಟಲೆ ಸಂಚಾರಿ ಪೊಲೀಸರು ಕಾರ್ಯನಿರ್ವಹಿಸುತ್ತಾರೆ. ಅವರ ಬಳಿ ವಿನಾಕಾರಣ ಜಗಳ ಮಾಡದೆ ಸಹಕರಿಸಬೇಕು ಎಂದರು. ಅದೇ ರೀತಿ ಹಲವಾರು ಸಭೆಗಳಲ್ಲಿ ಪೊಲೀಸರಿಗೆ ಸಾರ್ವಜನಿಕರ ಜೊತೆ ಯಾವ ರೀತಿಯ ವರ್ತನೆ ತೋರಬೇಕು ಎಂಬುದರ ಬಗ್ಗೆ ನಾನು ಮಾರ್ಗದರ್ಶನ ಮಾಡಿದ್ದೇನೆ. ಅವರು ಕೂಡ ಸಭ್ಯತೆ ಮೀರಬಾರದು ಎಂದರು.
ಇದಕ್ಕೂ ಮುನ್ನ ವರ್ತಕರ ಸಂಘದ ಅಧ್ಯಕ್ಷರಾದ ರಂಗನಾಥ್ ಮಾತನಾಡಿ, ಮೊದಲು ಮನೆಗೆ ಒಂದೇ ವಾಹನವಿತ್ತು. ನಗರ ಬೆಳೆದಿದೆ. ಜನಸಂಖ್ಯೆ ಜಾಸ್ತಿಯಾಗಿದೆ. ವ್ಯವಸ್ಥೆಗಳು ಬದಲಾಗಿದೆ. ಪ್ರತಿ ಮನೆಯಲ್ಲೂ ಮೂರ್ನಾಲ್ಕು ವಾಹನಗಳಿವೆ. ನೆಹರೂ ರಸ್ತೆಯ ಕಸ್ತೂರಬಾ ಕಾಲೇಜು ಹಿಂಭಾಗದಲ್ಲಿ ಕನ್ಸರ್‍ವೆನ್ಸಿ ಇದೆ. ಜೆ.ಹೆಚ್. ಪಟೇಲ್ ಕಾಂಪ್ಲೆಕ್ಸ್‍ನಲ್ಲೂ ಕೂಡ ಮಲ್ಟಿಲೆವೆಲ್ ಪಾರ್ಕಿಂಗ್ ವ್ಯವಸ್ಥೆಗೆ ಜಾಗ ಕಲ್ಪಿಸಬಹುದು. ಸುಲ್ತಾನ್‍ಗೋಲ್ಡ್ ಪಕ್ಕದಲ್ಲೂ ಕೂಡ ಪಾಲಿಕೆಗೆ ಸೇರಿದ ಜಾಗದಲ್ಲಿ ದ್ವಿಚಕ್ರ ವಾಹನಕ್ಕೆ ಅವಕಾಶ ನೀಡಬಹುದು. ನಾಗರೀಕರು ಶಿಷ್ಟಾಚಾರ ಮತ್ತು ಶಿಸ್ತುಪಾಲನೆ ಮಾಡದೇ ಇದ್ದಲ್ಲಿ ಸಮಸ್ಯೆ ಬಗೆಹರಿಯುವುದಿಲ್ಲ ಎಂದರು.

ಶ್ರೀನಿಧಿ ಸಿಲ್ಕ್‌ನ ಅಶ್ವತ್ಥನಾರಾಯಣಶೆಟ್ಟಿ ಮಾತನಾಡಿ, ವ್ಯಾಪಾರದಲ್ಲಿ ಸ್ಪರ್ಧೆ ಇದೆ. ಪಾರ್ಕಿಂಗ್ ಜಾಗ ಇಲ್ಲದೆ ಗ್ರಾಹಕರು ಬರುವುದಿಲ್ಲ. ಸಿಗ್ನಲ್‍ಲೈಟ್‍ಗಳಲ್ಲಿ ನಿಲ್ಲುವ ತಾಳ್ಮೆ ಕೂಡ ಸವಾರರಿಗೆ ಇಲ್ಲ, ಮೊದಲು ನಾವು ಬದಲಾಗಬೇಕು. ನಾಗರೀಕ ಪ್ರಜ್ಞೆ ಇರಬೇಕು ಸಂಚಾರಿ ಪೊಲೀಸರಿಗೆ ವರ್ತಕರ ಪೂರ್ಣ ಸಹಕಾರವಿದೆ ಎಂದರು. ಗಾರ್ಡನ್ ಏರಿಯಾದಲ್ಲಿ ಹಾರ್ಡ್‍ವೇರ್ ಶಾಪ್‍ಗಳ ಹಾವಳಿ ಹೆಚ್ಚಾಗಿದ್ದು, ಅಲ್ಲಿ ಬರುವ ದೊಡ್ಡ ಲಾರಿಗಳು ಮತ್ತು ಎಲ್ಲೆಂದರಲ್ಲಿ ಅನ್‍ಲೋಡ್ ಮಾಡುವ ಸಣ್ಣ ವಾಹನಗಳಿಂದ ತೊಂದರೆಯಾಗುತ್ತಿದೆ.
ನೆಹರೂ ರಸ್ತೆಯ ಮಾಲೀಕರು ಮತ್ತು ಗ್ರಾಹಕರು ಗಾರ್ಡನ್ ಏರಿಯಾದ ಅಡ್ಡ ರಸ್ತೆಗಳಲ್ಲಿ ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಾರೆ. ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ತಮ್ಮ ವಾಹನಗಳನ್ನು ಇತರರ ಮನೆ ಬಾಗಿಲಲ್ಲೇ ಬೆಳಿಗ್ಗೆಯಿಂದ ರಾತ್ರಿಯವರೆಗೆ ಪಾರ್ಕಿಂಗ್ ಮಾಡಿ ಹೋಗುತ್ತಾರೆ. ಅಂಗಡಿಗಳಿಗೆ, ಸರಕು ಡೆಲಿವರಿಗೆ ಬರುವ ವಾಹನಗಳಿಗೆ ಸಮಯ ನಿಗಧಿಪಡಿಸಿ, ಫುಟ್‍ಪಾತ್ ತೆರವುಗೊಳಿಸಿ ಟೈಗರ್ ವಾಹನವನ್ನು ಬಿಟ್ಟು ನಿಯಮ ಉಲ್ಲಂಘಿಸಿದ ವಾಹನಗಳಿಗೆ ದಂಡಹಾಕಿ, ನೆಹರೂ ರಸ್ತೆಯ ಮಧ್ಯಭಾಗದಲ್ಲಿರುವ ಗಿಡಗಳನ್ನು ಟ್ರಿಮ್ಮಿಂಗ್ ಮಾಡಿ ಮುಂತಾದ ಅನೇಕ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಸಂಚಾರಿ ಇನ್ಸ್‍ಪೆಕ್ಟರ್ ದೇವರಾಜ್, ಪ್ರಮುಖರಾದ ಬಳ್ಳೆಕೆರೆ ಸಂತೋಷ್, ಪಾಲಿಕೆ ಎಇಇ ಜ್ಯೋತಿ, ಪುಷ್ಪಾವತಿ, ಪಿಎಸ್‍ಐ ಭಾರತಿ, ಸ್ವಪ್ನ ಸೇರಿದಂತೆ ಸಂಚಾರಿ ಠಾಣೆಯ ಪೊಲೀಸರು ಮತ್ತು ನೆಹರೂ ರಸ್ತೆಯ ವರ್ತಕರ ಸಂಘದ ಸದಸ್ಯರು, ಪದಾಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSP Mithunkumarಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಗೃಹಸಚಿವ ಅಮಿತ್ ಷಾಗೆ ಬಳೆ ಪೋಸ್ಟ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು | ಕಾರಣವೇನು?

Next Post

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ - ಗೃಹಸಚಿವರ ರಾಜೀನಾಮೆಗೆ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

February 12, 2026
Mysore – Shivamogga Express Big Update on this Date | Must Read

ಹಾಸನ-ಸೋಲಾಪುರ ಎಕ್ಸ್’ಪ್ರೆಸ್ ರೈಲಿನ ಟೈಮಿಂಗ್ ಬದಲು | ಇಲ್ಲಿದೆ ಡೀಟೇಲ್ಸ್

February 12, 2026
ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

February 12, 2026
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು

ಶಿವಮೊಗ್ಗ | ಟ್ರಾಕ್ಟರ್ ಚಾಲಕನ ಬೇಜವಾಬ್ದಾರಿತನ, ಯುವಕ ಸಾವು!

February 12, 2026
ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

February 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL