ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಅವಶ್ಯಕ ಹಾಗೂ ಜೀವನದ ಒಂದು ಭಾಗವಾಗಬೇಕು ಎಂದು ಕಾಲೇಜಿನ ಆಡಳಿತಾಧಿಕಾರಿ ಆರ್. ನಾಗರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ಪಿಇಎಸ್ ಟ್ರಸ್ಟ್ ನ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ಪಿಇಎಸ್ ಪಿಯು ಕಾಲೇಜು 2025-26 ನೇ ಕ್ರೀಡಾ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯರಾದ ಎ. ನಾಗರಾಜ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ದೈಹಿಕ ಉಪನ್ಯಾಸಕ ನಾಗರಾಜ ಹಾಗೂ ಅವರ ಸಹಯೋಗದೊಂದಿಗೆ 100, 200, 4×400 ಮೀಟರ್ ಓಟ, ಶಾಟ್ ಪುಟ್, ಲಾಂಗ್ ಜಂಪ್, ಥಬಾಲ್, ಮತ್ತು ಫುಟ್ಬಾಲ್ ಆಟಗಳನ್ನು ಆಡಿ ಕ್ರೀಡೆಗೆ ಅದ್ಭುತವಾದ ಅರ್ಥ ಕಲ್ಪಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರು ಉಪಸ್ಥಿಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















