ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪೋಕ್ಸೋ ಪ್ರಕರಣ #POSCO ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಶಾಕ್ ನೀಡಿದ್ದು, ಪ್ರಕರಣವನ್ನು ರದ್ದು ಮಾಡಲು ನಿರಾಕರಿಸಿದೆ.
ತಮ್ಮ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಬೇಕು ಎಂದು ಕೋರಿ ಬಿ.ಎಸ್. ಯಡಿಯೂರಪ್ಪ ಅವರ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರು, ಪ್ರಕರಣವನ್ನು ರದ್ದು ಮಾಡಲು ನಿರಾಕರಿಸಿದ್ದಾರೆ.
ಆಪಾದಿತ ಅಪರಾಧವನ್ನು ಗಮನದಲ್ಲಿಟ್ಟುಕೊಂಡು, ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿದ್ದ ವಿಚಾರಣಾ ನ್ಯಾಯಾಲಯದ ಫೆಬ್ರವರಿ 28ರ ಆದೇಶವನ್ನು ಪೀಠ ಎತ್ತಿಹಿಡಿದಿದೆ.
ಆರೋಪ ಕೈಬಿಡುವುದು ಸೇರಿದಂತೆ ಯಾವುದೇ ಅರ್ಜಿಗಳನ್ನು ಸಲ್ಲಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ ಎಂದು ಏಕಸದಸ್ಯ ಪೀಠ ಸ್ಪಷ್ಟಪಡಿಸಿದೆ.
ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದಾಖಲಾದ ದೂರಿನ ಅನ್ವಯ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post