ಕಲ್ಪ ಮೀಡಿಯಾ ಹೌಸ್ | ಬಿಹಾರ |
ಬಿಹಾರ #Bihar ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, 10 ಗಂಟೆ ವೇಳೆ ಎನ್’ಡಿಎ #NDA ಮೈತ್ರಿಕೂಟ 170 ಕ್ಷೇತ್ರಗಳಲ್ಲಿ ಐತಿಹಾಸಿಕ ಮುನ್ನಡೆ ಕಾಯ್ದುಕೊಂಡಿದೆ.
ಮತ ಎಣಿಕೆ ಮುಂದುವರೆದಿದ್ದು 10 ಗಂಟೆ ವೇಳೆಗೆ ಬಿಜೆಪಿ #BJP ನೇತೃತ್ವದ ಎನ್’ಡಿಎ ಮೈತ್ರಿಕೂಟ 170 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಇನ್ನು, ಕಾಂಗ್ರೆಸ್ #Congress ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟ 67 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದು, ಈ ಮೂಲಕ ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿದೆ.
ಕಾಂಗ್ರೆಸ್ ಪಕ್ಷ ವೈಯಕ್ತಿಕವಾಗಿ ಕೇವಲ 12 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದು, ಭಾರೀ ಹಿನ್ನಡೆಯಾಗಿದೆ.
ಎನ್’ಡಿಎ ಮೈತ್ರಿ ಕೂಟಕ್ಕೆ ಮುನ್ನಡೆ ಸಿಕ್ಕಿರುವ ಹಿನ್ನೆಲೆಯಲ್ಲಿ ಮಿತ್ರ ಪಕ್ಷಗಳ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಇದೇ ವೇಳೆ, ಈಗಾಗಲೇ ನಿತೀಶ್ ಮತ್ತೆ ಸಿಎಂ ಎಂದು ಜೆಡಿಯು ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಲಾಗಿದೆ. ಆದರೆ, ಮುಖ್ಯಮಂತ್ರಿ ಅಭ್ಯರ್ಥಿ ಕುರಿತಾಗಿ ಫಲಿತಾಂಶದ ನಂತರ ನಿರ್ಧರಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post