ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಹುಲ್ ಗಾಂಧಿ #Rahul Gandhi ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೆ ಎಂಬ ಲೆಕ್ಕವನ್ನು ಹಾಕಲು ಸಾಧ್ಯವಿಲ್ಲ ಎಂದು ಬಿಜೆಪಿ ಮುಖಂಡ ಆರ್. ಅಶೋಕ್ #R Ashok ಲೇವಡಿ ಮಾಡಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ #Bihara Assembly Election ಎನ್’ಡಿಎ #NDA ಭರ್ಜರಿ ಗೆಲುವಿನತ್ತ ದಾಪುಗಾಲು ಹಾಕುತ್ತಿರುವ ಹಿನ್ನೆಲೆಯಲ್ಲಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆಕಾಶದಲ್ಲಿರುವ ನಕ್ಷತ್ರಗಳನ್ನು ಎಣಿಸಿಬಿಡಬಹುದೇನೋ ಆದರೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ಎಷ್ಟು ಬಾರಿ ಸೋಲಿಸಿದ್ದಾರೆ ಎಂಬುದನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಎಂದು ಕಟಕಿಯಾಡಿದ್ದಾರೆ.
ಸುಶಾಸನ, ಭ್ರಷ್ಟಾಚಾರ ಮುಕ್ತ ಆಡಳಿತ, ಅಭಿವೃದ್ಧಿ ರಾಜಕಾರಣದಿಂದಾಗಿ ಜನಮನ್ನಣೆ ಗಳಿಸಿರುವ ನಿತೀಶ್ ಕುಮಾರ್ ಅವರ ನೇತೃತ್ವದ ಎನ್’ಡಿಎ ಸರ್ಕಾರದ ಮುಂದೆ ಜಂಗಲ್ ರಾಜ್ ಕುಖ್ಯಾತಿಯ ಆರ್’ಜೆಡಿ – ಕಾಂಗ್ರೆಸ್ ಮಹಾಘಟಬಂಧನ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಪಕ್ಕಕ್ಕೆ ಚೆನ್ನಾಗಿ ಗೊತ್ತಿತ್ತು. ಆದ್ದರಿಂದಲೇ ರಾಹುಲ್ ಗಾಂಧಿ ಅವರು ಮುಖಭಂಗ ತಪ್ಪಿಸಿಕೊಳ್ಳಲು ವೋಟ್ ಚೋರಿ ಎಂಬ ಕಟ್ಟುಕಥೆ ಮೂಲಕ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದು ಎಂದಿದ್ದಾರೆ.
ಆದರೆ ಬಿಹಾರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ ವೋಟ್ ಚೋರಿ ಪ್ರಹಸನವ್ನ ಸಾರಾಸಗಟಾಗಿ ತಿರಸ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನಿತೀಶ್ ಕುಮಾರ್ ಅವರ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಸ್ಪಷ್ಟ ಜನಾದೇಶ ನೀಡಿದ್ದಾರೆ ಎಂದಿದ್ದಾರೆ.
ಹರಿಯಾಣ, ಮಹಾರಾಷ್ಟç, ಬಿಹಾರದಲ್ಲಿ ಬಂದಿರುವ ಸ್ಥಿತಿಯೇ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲೂ ಬರುವ ದಿನ ಬಹಳ ದೂರವಿಲ್ಲ. ಈಗಾಗಲೇ ಜನಮನ್ನಣೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನೂರಕ್ಕೆ ನೂರು ಗ್ಯಾರೆಂಟಿ ಎಂದಿದ್ದಾರೆ.
ಎನ್’ಡಿಎ ಗೆಲುವಿಗೆ ಕಾರಣೀಭೂತರಾದ ಬಿಹಾರ ಬಿಜೆಪಿ ಮತ್ತು ಜೆಡಿಯ ಸೇರಿದಂತೆ ಮೈತ್ರಿಕೂಟದ ಎಲ್ಲ ನಾಯಕರು, ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















