ಕಲ್ಪ ಮೀಡಿಯಾ ಹೌಸ್ | ಸುಬ್ರಹ್ಮಣ್ಯ |
ದಕ್ಷಿಣ ಕನ್ನಡದ #DakshinaKannada ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಅವರು, ಅಲ್ಲಿ ನಡೆಯುತ್ತಿರುವ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಕಾರ್ಯಗಳನ್ನು ಪರಿಶೀಲಿಸಿದರು.
ಸುಬ್ರಹ್ಮಣ್ಯ ರೋಡ್ #SubrahmanyaRoad ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಪ್ರಗತಿಯಲ್ಲಿರುವ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಕಾರ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿದರು.
ನಿಲ್ದಾಣದಲ್ಲಿ ಪ್ರಯಾಣಿಕ ಸೌಲಭ್ಯಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಸೇವಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ವಿವಿಧ ಅಂಶಗಳನ್ನು ಅವಲೋಕಿಸಿದರು. ನಂತರ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ಅವರು, ಸಲಹೆಗಳನ್ನು ಪಡೆದುಕೊಂಡರು.

ಭೇಟಿಯ ಸಂದರ್ಭದಲ್ಲಿ ಮುಕುಲ್ ಸರನ್ ಮಾಥುರ್ ಮತ್ತು ಮುದಿತ್ ಮಿತ್ತಲ್ ಅವರು ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಲ್ಲಿ ಪ್ರಯಾಣಿಕರೊಂದಿಗೆ ಸಂವಹನ ನಡೆಸಿ, ರೈಲ್ವೆ ಸೌಲಭ್ಯಗಳು, ಸೇವೆಗಳು ಮತ್ತು ಪ್ರಯಾಣ ಅನುಭವದ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು.
ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಿ ಪ್ರಯಾಣಿಕರಿಂದ ದೊರೆತ ಸಲಹೆಗಳನ್ನು ದಾಖಲಿಸಿಕೊಂಡು ತ್ವರಿತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಪರಿಶೀಲನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಸಂವಾದಗಳು, ರೈಲ್ವೆ ಆಡಳಿತವು ಮೂಲಸೌಕರ್ಯ ಬಲಪಡಿಸುವುದು, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವುದು ಹಾಗೂ ಪ್ರಯಾಣಿಕರ ಕೇಂದ್ರಿತ ಸೇವೆಗಳನ್ನು ವಿಸ್ತರಿಸುವುದಕ್ಕೆ ಬದ್ಧವಾಗಿರುವುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post