ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಯಲಬುರ್ಗಾ ಪೊಲೀಸ್ ಠಾಣ ವ್ಯಾಪ್ತಿಯ ಮಧ್ಲೂರು ಗ್ರಾಮದಲ್ಲಿ ನಡೆದಿದೆ.
ಅತ್ಯಾಚಾರಕ್ಕೆ ಒಳಗಾದ ಮಹಿಳೆ ಹೊಸಪೇಟೆ ಮೂಲದವರು ಎಂದು ತಿಳಿದು ಬಂದಿದೆ. ಇವರನ್ನು ದುಷ್ಕರ್ಮಿಗಳು ಬೈಕಿನಲ್ಲಿ ಬಲವಂತವಾಗಿ ಕರೆದೊಯ್ದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಲಾಗಿದೆ.

ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಲಕ್ಷ್ಮಣ ಕೆಂಚಪ್ಪ ಕರಗುಳಿ ರೋನ್ , ಬಸವರಾಜ ಸಕ್ರೆಪ್ಪ , ಭೀಮಪ್ಪ ಮಹದೇವಪ್ಪ ಮಸ್ಕಿ ಹನುಮಾಪುರ , ಶಾಹಿಕುಮಾರ ಮಹದೇವಪ್ಪ ಮಸ್ಕಿ ಹನುಮಾಪುರ ನಾಲ್ವರನ್ನು ಬಂಧಿಸಲಾಗಿದ್ದು ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post