ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ #Robbery in Bangalore ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಯದೇವ ಡೇರಿ ಸರ್ಕಲ್ ಬಳಿ ಇಂದು ಮಧ್ಯಾಹ್ನ ದರೋಡೆ ನಡೆದಿದ್ದು, ಒಂದು ವಾಹನದಿಂದ ಇನ್ನೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದ ವೇಳೆ ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿ ಪರಾರಿಯಾಗಿದ್ದಾರೆ.

ಎಟಿಎಂ ವಾಹನದಲ್ಲಿ ಒಟ್ಟು ನಾಲ್ಕು ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಓರ್ವ ಡ್ರೈವರ್,ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಇದ್ದು, ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಇವರ ವಿಚಾರಣೆ ನಡೆಯುತ್ತಿದೆ. ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post