ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ #Chinnaswamy Stadium stampede 11 ಜನರ ಸಾವಿನ ಕೇಸ್ ಸಂಬಂಧ ತನಿಖೆ ಮುಗಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಸಿಐಡಿ ಅಧಿಕಾರಿಗಳು ತಯಾರಿ ನಡೆಸಿದ್ದು, 2,200ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ರೆಡಿಯಾಗಿದೆ.
ಚಾರ್ಜ್ ಶೀಟ್ ಸಲ್ಲಿಕೆಗೆ ಹೈಕೋರ್ಟ್ನಿಂದ #Highcourt ಗ್ರೀನ್ ಸಿಗ್ನಲ್ ಹಿನ್ನೆಲೆ ತನಿಖೆ ಮುಗಿಸಿ ಸಿಐಡಿ #CID ಚಾರ್ಜ್ ಶೀಟ್ ಸಿದ್ಧಪಡಿಸಿದೆ. ನೂರಾರು ಪ್ರತ್ಯಕ್ಷ ಸಾಕ್ಷಿ, ಸಿಸಿಟಿವಿ, ಗಾಯಾಳುಗಳ ಹೇಳಿಕೆ ದಾಖಲಿಸಲಾಗಿದ್ದು, RCB ಜೊತೆ KSCA, DNA ವಿರುದ್ಧ ಹಲವು ಸಾಕ್ಷ್ಯಗಳು ಪತ್ತೆಯಾಗಿದ್ದು, ಘಟನೆಗೆ ನೇರ ಕಾರಣ ಅನ್ನೋದು ತನಿಖೆ ವೇಳೆ ಬಯಲಾಗಿದೆ. ಹೀಗಾಗಿ ಚಾರ್ಜ್ ಶೀಟ್ನಲ್ಲಿ ಮೂರು ಸಂಸ್ಥೆಗಳನ್ನ ಸಿಐಡಿ ನೇರ ಹೊಣೆ ಮಾಡಿದೆ.

ಟಿಕೆಟ್ ಬಗ್ಗೆ ಆರ್ಸಿಬಿ ಗೊಂದಲ ಹುಟ್ಟಿಸಿದ್ದೇ, ಘಟನೆಗೆ ಮೊದಲ ಕಾರಣ. ಅಲ್ಲದೇ ಡಿಎನ್ಎ ಕಡೆಯಿಂದ ಯಾವುದೇ ಸೆಕ್ಯುರಿಟಿ ಪ್ಲಾನ್ ಇರಲಿಲ್ಲ. ಖಾಸಗಿ ಸೆಕ್ಯುರಿಟಿ ಏಜೆನ್ಸಿ ಬಳಕೆಯೂ ವಿಫಲವಾಗಿದೆ. ಪೊಲೀಸರ ಜೊತೆ ಕೂಡ ಸರಿಯಾದ ಮಾತುಕತೆ ನಡೆಸದೆ ಕಾರ್ಯಕ್ರಮ ಆಯೋಜನೆ ಮಾಡಿರೋದು ತನಿಖೆ ವೇಳೆ ಗೊತ್ತಾಗಿದೆ ಎನ್ನಲಾಗಿದೆ.

RCB ತಂಡ 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆದ ಹಿನ್ನಲೆ ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆದಿತ್ತು. ಈ ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದ ಪರಿಣಾಮ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರೆ, ಹಲವರು ಅಸ್ವಸ್ಥಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post