ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ತಿರುಪತಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ #Robbery in Bangalore ಮಾಡಿ ಪರಾರಿಯಾಗಿರುವ ಘಟನೆಗೆ ಸಂಬಂಧಪಟ್ಟಂತೆ ಹೇಮಂತ್, ಸುನೀಲ್ ಎಂಬ ಇಬ್ಬರು ಆರೋಪಿಗಳನ್ನು ಬಂದಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದಾರೆ ಎನ್ನಲಾದ ಇನ್ನೋವಾ ಕಾರನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದ ಗ್ಯಾಂಗ್, ನಾವು ಆರ್ಬಿಐನವರು ಎಂದು ಹೇಳಿಕೊಂಡು ಹೆದರಿಸಿದ್ದರು. ಗನ್ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್ಗೆ ಕರೆದೊಯ್ದಿದ್ದರು. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ವಾಹನ ನಿಲ್ಲಿಸಿ ಅದರಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







Discussion about this post