ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಹಂತ ಜ್ಯೋತಿ ಟ್ರಸ್ಟ್ 70ನೇ ಕನ್ನಡ ನಾಡ ಹಬ್ಬದ ಪ್ರಯುಕ್ತ ಹಂಸ ಸಾಂಸ್ಕೃತಿಕ ಸಾಮಾಜಿಕ ಸಿಂಚನ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ನಗರದ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ 1000 ರೋಗಿಗಳಿಗೆ ಉಚಿತವಾಗಿ ಹಣ್ಣು ಹಂಪಲು ಮತ್ತು ಸಿಹಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ ನಿರ್ದೇಶಕ ಡಾ. ಟಿ. ನವೀನ್ ಸಮಾರಂಭ ಉದ್ಘಾಟಿಸಿದರು. ಹಿರಿಯರಂಗ ಸಂಘಟಕ ಶ್ರೀನಿವಾಸ ಜಿ ಕಪ್ಪಣ್ಣ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟ ಲವ್ಲಿ ಸ್ಟಾರ್ ಪ್ರೇಮ್ #Lovelystar Prem ಮಾತನಾಡುತ್ತ ಕಳೆದ 27 ವರ್ಷಗಳಿಂದ ದಾನಿಗಳ ನೆರವಿನಿಂದ ಈ ಉಪಯುಕ್ತ ಸೇವಾ ಕಾರ್ಯ ಮಾಡುತ್ತ ಸಾಗಿರುವ ಹಂಸಜ್ಯೋತಿ ಟ್ರಸ್ಟ್ ನ ಕಾರ್ಯ ಶ್ಲಾಘನೀಯ ಎಂದು ಆಭಿನಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post