ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ದಸರಾ ಕಾರ್ಯಕ್ರಮಗಳಲ್ಲಿ ನಗರದ ಪಿಇಎಸ್ ಐಎಎಮ್‌ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 35 ಜನ ಸ್ವಯಂಸೇವಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಇವರಿಗೆ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣಗೌಡ ಪ್ರಮಾಣಪತ್ರಗಳನ್ನು ನೀಡಿ ಸ್ವಯಂ ಸೇವಕರ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಯೂಥ್ ಫಾರ್ ಸೇವಾದ ಜಿಲ್ಲಾ ಸಂಚಾಲಕ ಆಶ್ರಿತ್ ಹಾಗೂ ಪದಾಧಿಕಾರಿಗಳು, ಪಿಇಎಸ್ ಐಎಎಮ್‌ಎಸ್ ಕಾಲೇಜಿನ ಪ್ರಾಂಶುಪಾಲ ಡಾ ಸುದರ್ಶನ್ ಜಿ. ಎಂ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಭವ್ಯ. ವಿ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಓಝ್ವಿನ್ ಸಾಂತ್‌ಮೇಯರ್ ಹಾಗೂ ರಾಸೇಯೋ ಸ್ವಯಂಸೇವಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post