ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ದಾವಣಗೆರೆ ಜಿಲ್ಲೆಯ ಡಿಸಿಯಾಗಿ ಜನಮಾನಸಲ್ಲಿ ನೆಲೆಯೂರಿದ್ದ ಹಾಲಿ ಬೆಸ್ಕಾಂ ಎಂಡಿ ಆಗಿ ಸೇವೆ ಸಲ್ಲಿಸುತ್ತಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.
ಕಾರಿಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಾಂತೇಶ್ ಬೀಳಗಿ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.

ಮಹಾಂತೇಶ್ ಬೀಳಗಿ 2012ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದರು. ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುವ ವೇಳೆ ತಮ್ಮ ಜನಪರವಾದ, ಕನ್ನಡ ಪರವಾದ, ಬಡವರ ಪರವಾದ ಹಾಗೂ ನ್ಯಾಯದ ಪರವಾಗಿ ಇವರ ನಡೆ ವ್ಯಾಪಕ ಜನ ಮೆಚ್ಚುಗೆಗೆ ಪಾತ್ರವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post