ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನವೆಂದರೆ ಭಾರತದ ಸಂವಿಧಾನ. ಬಹುವೈವಿಧ್ಯಮಯವಾದ ಭಾರತ ದೇಶದಲ್ಲಿ ಎಲ್ಲರೂ ಒಗ್ಗೂಡಿ ಬಾಳಲು ಮತ್ತು ಸಾರ್ಥಕವಾಗಿ ಸಾಧನೆ ಮಾಡಲು ಭಾರತ ಸಂವಿಧಾನ ಮಾರ್ಗದರ್ಶನ ಮಾಡುತ್ತದೆ. ಇಂದು ಪ್ರಸ್ತಾವನೆ ಬೋಧಿಸುವದಷ್ಟೇ ಮಾತ್ರವಲ್ಲ ಅದರಂತೆ ಅನುಸರಿಸಬೇಕು. ಆಗ ಭಾರತ ದೇಶ ಸಮೃದ್ಧವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ, ಪ್ರೊ. ಶರತ್ ಅನಂತಮೂರ್ತಿ ಅವರು ಅಭಿಪ್ರಾಯಪಟ್ಟರು.
ಅವರು ಕುವೆಂಪು ವಿಶ್ವವಿದ್ಯಾಲಯದ #Kuvempu University ಆಡಳಿತ ಭವನದಲ್ಲಿ ಬುಧವಾರ ಏರ್ಪಡಿಸಿದ್ದ 76ನೇ ಭಾರತದ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕುಲಸಚಿವ ಎ ಎಲ್ ಮಂಜುನಾಥ್, ಹಣಕಾಸು ಅಧಿಕಾರಿ ಪ್ರೊ. ರಮೇಶ್, ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಜಗನ್ನಾಥ್ ಡಾಂಗೆ, ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ನೆಲ್ಲಿಕಟ್ಟೆಎಸ್. ಸಿದ್ದೇಶ್, ಅಧ್ಯಾಪಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಭಾಗವಹಿಸಿದ್ದರು.
ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳಲ್ಲಿ ಏಕಕಾಲದಲ್ಲಿ ಮುಖ್ಯಸ್ಥರು ಪ್ರಸ್ತಾವನೆಯನ್ನು ಬೋಧಿಸಿದ್ದು ವಿಶೇಷವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post