ಕಲ್ಪ ಮೀಡಿಯಾ ಹೌಸ್ | ಉಡುಪಿ |
ಶ್ರೀಕೃಷ್ಣ ಮಠದಲ್ಲಿ #Udupi Shri Krishna Mutt ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು #PM Narendra Modi ನಾಳೆ ಶುಕ್ರವಾರ ಉಡುಪಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಇಡೀ ಕೃಷ್ಣ ನಗರಿ ಕೇಸರಿ ಮಯವಾಗಿ ಪರಿವರ್ತಿತಗೊಂಡಿದೆ.
ಪ್ರಧಾನಿಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಮುನ್ನ, ಬನ್ನಂಜೆಯಿಂದ ಕಲ್ಸಂಕದವರೆಗೆ ಸುಮಾರು 20 ನಿಮಿಷಗಳ ಕಾಲ ರೋಡ್ ಶೋ ನಡೆಸಲಿದ್ದಾರೆ. ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವೀಕ್ಷಿಸಲು ಬ್ಯಾರಿಕೇಡ್’ಗಳನ್ನು ಅಳವಡಿಸಲಾಗಿದೆ. ಈ ರೋಡ್ ಶೋ ಮಾರ್ಗದಲ್ಲಿ ಬಂಟಿಂಗ್ಸ್ ಮತ್ತು ಕೇಸರಿ ಪತಾಕೆಗಳನ್ನು ಹಾಕಲಾಗಿದೆ.

ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಹಾಗೂ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಜಮಾವಣೆ ಆಗುವ ನಿರೀಕ್ಷೆ ಇದು, ಮೂರು ಕಡೆಗಳಲ್ಲಿ ನಿಧಾನಗತಿಯಲ್ಲೇ ಸಾಗಲಿರುವ ಕಾರಿನಲ್ಲಿ ಪ್ರಧಾನಿಯವರು ಸಾರ್ವಜನಿಕರಿಗೆ ಕೈಬೀಸುತ್ತ ಸಾಗಲಿದ್ದಾರೆ.
ಆದಿ ಉಡುಪಿ ಹೆಲಿಪಾಡ್’ನಿಂದ ಕೃಷ್ಣಮಠದವರೆಗೆ ಎರಡು ಹಂತದ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಡಿವೈಡರ್’ಗಳ ಮೇಲೆ ಕೇಸರಿ ಪತಾಕೆಗಳನ್ನು ಸಾಲು ಸಾಲಾಗಿ ಅಲಂಕರಿಸಲಾಗಿದೆ. ಕೃಷ್ಣಮಠ ಕೂಡ ಪ್ರಧಾನಿಯ ಸ್ವಾಗತದ ಸಿದ್ಧತೆಗಳಲ್ಲಿ ತೊಡಗಿದ್ದು, ಸಂಪೂರ್ಣ ರೋಡ್ ಶೋ ಸುಮಾರು 15 ನಿಮಿಷಗಳವರೆಗೆ ಮುಂದುವರೆಯಲಿದೆ ಎನ್ನಲಾಗಿದೆ.

ಇನ್ನು ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ದಾವಣಗೆರೆ, ಮೈಸೂರು, ಬೆಂಗಳೂರು ಶಿವಮೊಗ್ಗ ಜಿಲ್ಲೆಗಳಿಂದ 3000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.
10 ಎಸ್ಪಿ, 27 ಡಿವೈಎಸ್ಪಿ, 49 ಇನ್ಸ್‌ಸ್ಪೆಕ್ಟರ್, 127 ಎಸ್’ಐ, 232 ಎಎಸ್’ಐ, 1608 ಪಿಸಿ, 39 ಡಬ್ಲ್ಯೂ ಪಿ ಸಿ , 48 ಬಿಡಿಡಿಎಸ್ ಟೀಂ, ಆರು ಕೆಎಸ್’ಆರ್‌ಪಿ, ಆರು ಕ್ಯೂಆರ್’ಟಿ ಟೀಂ ನಿಯೋಜನೆ ಮಾಡಲಾಗಿದೆ. ರೋಡ್ ಶೋ ಮಾರ್ಗದುದ್ದಕ್ಕೂ ಪೊಲೀಸರಿಂದ ನಿರಂತರ ತಪಾಸಣೆ ನಡೆಯಲಿದ್ದು, ನಗರದ ಎಲ್ಲಾ ಕಡೆ ಬಾಂಬ್ ಸ್ಕ್ವಾಡ್‌ಗಳಿಂದ ಪರಿಶೀಲನೆ ನಡೆಯುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post