ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳಿಂದ ಸಂಭವಿಸಬಹುದಾದ ದುರ್ಘಟನೆಗಳಿಂದ ನಾವು ಹೇಗೆ ಸುರಕ್ಷಿತರಾಗಿ ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬ ಅರಿವನ್ನು ಮೂಡಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಸುರಕ್ಷತೆ ಮೊದಲು’ ಎಂಬ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವೃತ್ತಿಪರ ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿಯಾದ ಶ್ರೀ ಸತ್ಯರಾಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾತ್ಯಕ್ಷಿಕೆಗಳ ಮೂಲಕ ಸುರಕ್ಷತೆಯ ಬಗ್ಗೆ ಅರಿವನ್ನು ಮೂಡಿಸಿದರು. ಬೆಂಕಿಯಿಂದ,ನೀರಿನಿಂದ ಮತ್ತು ಅಪಘಾತಗಳು ಸಂಭವಿಸಿದಾಗ ಯಾವ ರೀತಿಯಾಗಿ ಪ್ರತಿಕ್ರಿಯೆಸಬೇಕು ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ ಭಯ ಮುಕ್ತರಾಗಿ ಅದನ್ನು ಎದುರಿಸುವಲ್ಲಿ ನಾವು ಹೇಗೆ ಸಿದ್ಧರಿರಬೇಕೆಂಬುದನ್ನು ತಿಳಿಯಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post