ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಾಲಾ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪಟ್ಟಣದ ಆಶ್ರಯ ಬಡಾವಣೆ ನಿವಾಸಿ ವಿನಾಯಕ (36) ಎಂದು ಗುರುತಿಸಲಾಗಿದೆ.

ಈ ಸಂದರ್ಭದಲ್ಲಿ ಹಿಂಬದಿಯಿAದ ಬಂದ ಶಾಲಾ ಬಸ್ ವಿನಾಯಕ್ ಬೈಕ್’ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ಹಿಂಬದಿ ಸವಾರ ಮೋಹನ್ ಗಾಯಗೊಂಡಿದ್ದು, ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಕುರಿತು ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post