ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಜಿಲ್ಲಾಡಳಿತ ಹಾಗೂ ಹಲವು ಸಂಸ್ಥೆಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ಡಿಸೆಂಬರ್ 20ರಿಂದ ಜನವರಿ 4ರವರೆಗೂ ಕರಾವಳಿ ಉತ್ಸವವನ್ನು #KaravaliUtsav2025 ಆಯೋಜಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅವರು ಮಾಹಿತಿ ನೀಡಿದ್ದು, #DakshinaKannada ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಪಂಚಾಯ್ತಿ ಮತ್ತು ಸ್ಥಳೀಯ ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಸಾಂಸ್ಕೃತಿಕ, ಕ್ರೀಡಾ ಮತ್ತು ಮನೋರಂಜನಾ ಚಟುವಟಿಕೆಗಳ ಸಮಾಗಮವಾಗಿ ಕರಾವಳಿ ಉತ್ಸವ ಡಿಸೆಂಬರ್ 20ರಿಂದ ಜನವರಿ 4ರ ವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಉತ್ಸವದ ಅವಧಿಯಾದ್ಯಂತ ಕರಾವಳಿ ಉತ್ಸವ ಮೈದಾನದಲ್ಲಿ ನಾನಾ ಮಳಿಗೆಗಳು, ಪ್ರದರ್ಶನಗಳು ಮತ್ತು ಅಮ್ಯೂಸ್ಮೆಂಟ್ ಪಾರ್ಕ್ #AmusementPark ಸಾರ್ವಜನಿಕರಿಗಾಗಿ ಲಭ್ಯವಿರಲಿದೆ ಎಂದಿದ್ದಾರೆ.
ಇನ್ನು ಪ್ರಮುಖವಾಗಿ ಜನವರಿ 3 ಮತ್ತು 4ರಂದು ಪಣಂಬೂರು, ತಣ್ಣೀರುಬಾವಿ, ಸಸಿ ಹಿತ್ಲುಕಡಲ ತೀರಗಳಲ್ಲಿ ಸ್ಯಾಂಡಲ್ ವುಡ್ ಹಾಗೂ ಬಾಲಿವುಡ್ ಕಲಾವಿದರಿಂದ ಮ್ಯೂಸಿಕಲ್ ನೈಟ್’ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.
ಅಲ್ಲದೇ, ಉತ್ಸವದ ಮುಂದುವರೆದ ಭಾಗವಾಗಿ ಜನವರಿ ಮತ್ತು ಫೆಬ್ರವರಿಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post