No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಕೇವಲ ಕೃಷಿ ಬೆಳೆಗಳಿಂದ ರೈತ ಕೋಟ್ಯಾಧಿಪತಿ ಆಗಲು ಸಾಧ್ಯವಿಲ್ಲ : ಡಾ.ಬಿ. ಹೇಮ್ಲಾನಾಯಕ್

ಕೃಷಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 3, 2025
in Army
0
ಕೇವಲ ಕೃಷಿ ಬೆಳೆಗಳಿಂದ ರೈತ ಕೋಟ್ಯಾಧಿಪತಿ ಆಗಲು ಸಾಧ್ಯವಿಲ್ಲ : ಡಾ.ಬಿ. ಹೇಮ್ಲಾನಾಯಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೈತ ವಿಜ್ಞಾನಿಯಾದಾಗ ಮತ್ತು ಉದ್ಯಮಿಯಾದಾಗ ಮಾತ್ರ ಲಾಭ ಗಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಹೊಸ ಬೆಳೆಗಳ ಬಗ್ಗೆ ತಿಳಿದುಕೊಂಡು ವೈಜ್ಞಾನಿಕವಾಗಿ ಬೆಳೆ ಬೆಳೆದು ಲಾಭ ಪಡೆಯಬೇಕು ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರು ಮತ್ತು ಕುಲಸಚಿವರಾದ ಡಾ.ಬಿ. ಹೇಮ್ಲಾನಾಯ್ಕ ಹೇಳಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಅಡಿಕೆ ಸಂಶೋಧನಾ ಕೇಂದ್ರ, ಶಿವಮೊಗ್ಗ, ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿ, ಹುಬ್ಬಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಇಂಡಿಯನ್ ಸೊಸೈಟಿ ಆಫ್ ಸ್ಪೈಸಸ್, ಕ್ಯಾಲಿಕಟ್ ಮತ್ತು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಳ್ಳಿಕೆರೆ ಇವರ ಸಹಯೋಗದಲ್ಲಿ ‘ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿ’ ಕುರಿತು ನವುಲೆಯ ಕೃಷಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಹೊಟ್ಟೆ ತುಂಬಾ ಆಹಾರ ನೀಡಲು ಮಾತ್ರ ಸಾಧ್ಯ. ಕೇವಲ ಕೃಷಿ ಬೆಳೆಗಳಿಂದ ರೈತ ಕೋಟ್ಯಾಧಿಪತಿ ಆಗಲಾರರು. ತೋಟಗಾರಿಕೆ ಬೆಳೆಗಳು ಆರ್ಥಿಕತೆಗೆ ಹೆಚ್ಚಿನ ಉತ್ತೇಜನ ನೀಡುತ್ತವೆ. ಹೊಸ ಬೆಳೆಗಳ ಬಗ್ಗೆ ವೈಜ್ಞಾನಿಕವಾಗಿ ತಿಳಿದುಕೊಂಡು, ತಮ್ಮಲ್ಲಿರುವ ಸ್ವಾಭಾವಿಕ ಮೂಲಗಳನ್ನು ಬಳಸಿಕೊಂಡು ಮಿಶ್ರ ಬೆಳೆಗಳನ್ನು ಬೆಳೆದು ರೈತರು ಲಾಭ ಪಡೆಯಬಹುದು ಎಂದರು.

ಅಡಿಕೆ, ಕರಿಮೆಣಸು, ಸಾಂಬಾರು ಪದಾರ್ಥಗಳು, ಟೀ, ರಬ್ಬರ್ ನಂತಹ ತೋಟಗಾರಿಕೆ ಬೆಳೆಯಿಂದ ಆರ್ಥಿಕತೆ ಸುಧಾರಣೆ ಸಾಧ್ಯ. ನಮ್ಮ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಶೇ.70 ರಷ್ಟು ತೋಟಗಾರಿಕೆ ಬೆಳೆಗಳಿದ್ದರೆ ಶೇ. 12 ರಷ್ಟು ಕೃಷಿ ಬೆಳೆ ಮತ್ತು ಉಳಿದದ್ದು ಅರಣ್ಯ ಬೆಳೆ ಇದೆ. ಅಡಿಕೆಗೆ ಈಗಾಗಲೇ ಸಾಕಷ್ಟು ರೋಗಗಳು ಬರುತ್ತಿವೆ. ಈಗ ಅಡಿಕೆಗೆ ಉತ್ತಮ ಬೆಲೆ ಇದೆ. ಆದರೆ ಮುಂದಿನ ದಿನಗಳಲ್ಲಿ ರೈತರ ಕೈ ಹಿಡಿಯಲು ಪರ್ಯಾಯವಾದ ಮಿಶ್ರಬೆಳೆಗಳನ್ನು ಬೆಳೆಯಬೇಕು ಎಂದರು.
ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿ, ಡ್ರ‍್ಯಾಗನ್ ಫ್ರೂಟ್, ಮ್ಯಾಂಗೋಸ್ಟಿನ್, ಕೊಕೊ, ರಂಬುಟನ್‌ಗಳಂತಹ ಬೆಳೆ ಬೆಳೆಯಲು ಅವಕಾಶವಿದ್ದು ಇದಕ್ಕೆ ಪೂರಕವಾದ ವಾತಾವರಣ ಸೃಷ್ಟಿಸುವುದು ಸಹ ಮುಖ್ಯವಾಗುತ್ತದೆ. ನಮ್ಮಲ್ಲಿ ಅನೇಕ ಪ್ರಗತಿಪರ ರೈತರಿದ್ದು, ವೈಜ್ಞಾನಿಕವಾಗಿ ಮಿಶ್ರಬೆಳೆಯ ಬಗ್ಗೆ ತಿಳಿದು ಅಳವಡಿಸಿಕೊಳ್ಳಬೇಕಿದೆ ಎಂದರು. ಜಾಯಿಕಾಯಿ ಒಂದು ಸಾಂಬಾರು ಬೆಳೆಯಾಗಿದ್ದು, ಔಷಧೀಯ ಗುಣವಿರುವ ಕಾರಣ ಉತ್ತಮ ಬೇಡಿಕೆಯೂ ಇದೆ. ಘಮಘಮಿಸುವ ಎಣ್ಣೆಯನ್ನು ತೆಗೆಯಬಹುದು. ಔಷಧೀಯ ಗುಣಗಳಿರುವ ಕಾರಣ ಫಾರ್ಮಾಸಿಟಿಕಲ್ ಉದ್ದಿಮೆ ಹಾಗೂ ಆಯುರ್ವೇದದಲ್ಲಿಯೂ ಇದಕ್ಕೆ ಬೇಡಿಕೆ ಇದೆ. ಇದು ಜೀರ್ಣಕ್ರಿಯೆ ಶಕ್ತಿ ಹೆಚ್ಚಿಸುತ್ತದೆ. ಮೆದುಳನ್ನು ಚುರುಕುಗೊಳಿಸುತ್ತದೆ. ಈಗಾಗಲೇ ಕೇರಳ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಬೆಳೆಯಲಾಗುತ್ತಿದೆ ಎಂದರು.

ರೈತ ಕೃಷಿಕನಾಗಬೇಕು, ವಿಜ್ಞಾನಿಯಾಗಬೇಕು ಜೊತೆಗೆ ವ್ಯಾಪಾರಿಯೂ ಆಗಬೇಕು. ಆಗ ಮಾತ್ರ ಮಾತ್ರ ಲಾಭ ಸಿಗಲು ಸಾಧ್ಯ. ಉಪ ಕಸುಬುಗಳನ್ನು ಮಾಡಬೇಕು ಹಾಗೂ ವ್ಯವಸಾಯ ಉತ್ಪನ್ನ ಸಂಘಗಳ ಸಂಪರ್ಕದಲ್ಲಿರಬೇಕು ಎಂದ ಅವರು ಜಾಯಿಕಾಯಿ ವೈಜ್ಞಾನಿಕ ಬೇಸಾಯ ಕ್ರಮಗಳ ಬಗ್ಗೆ ತಿಳಿಯಲು ಹಲವಾರು ರೈತರು ಮುಂದಾಗಿರುವುದು ಸಂತಸದ ವಿಷಯವಾಗಿದ್ದು ಈ ತರಬೇತಿಯ ಸದುಪಯೋಗ ಪಡೆಯಬೇಕು ಎಂದರು.

ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿ, ಹುಬ್ಬಳ್ಳಿಯ ಪ್ರಧಾನ ವ್ಯವಸ್ಥಾಪಕರಾದ ಡಾ.ರಾಮಚಂದ್ರ ಕೆ ಮಡಿವಾಳ ಮಾತನಾಡಿ, ಭಾರತ ಸಾಂಬಾರು ಪದಾರ್ಥಗಳ ಶ್ರೀಮಂತ ದೇಶ. ಪ್ರಸ್ತುತ ಅಡಿಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಅಡಿಕೆಯೊಂದಿಗೆ ಪೂರಕ ಬೆಳೆ ಬಗ್ಗೆಯೂ ಚಿಂತಿಸಬೇಕಿದೆ. ಯಾವುದೇ ರೀತಿಯ ಆರ್ಥಿಕ ನಷ್ಟವಾಗದಂತೆ ಮಿಶ್ರಬೆಳೆಗೆ ಒತ್ತು ನೀಡಿ, ಆರ್ಥಿಕತೆ ಸುಧಾರಣೆ ಮಾಡಿಕೊಳ್ಳಬೇಕು. ರೈತ ಹೊಸ ಹೊಸ ಬೆಳೆಗಳ ಬಗ್ಗೆ ತಿಳಿದುಕೊಳ್ಳಬೇಕು. ಸಂದರ್ಭಕ್ಕನುಸಾರ ಬದಲಾವಣೆ ತಂದುಕೊಂಡು ಲಾಭ ಹೊಂದಬೇಕು. ರೈತ ಕೇವಲ ಕೃಷಿ ಮಾಡಿದರೆ ಸಾಲದು, ಒಬ್ಬ ಉದ್ದಿಮೆದಾರನಾಗಿ ಹೊರ ಹೊಮ್ಮಬೇಕಿದೆ. ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿಯನ್ನು ವೈಜ್ಞಾನಿಕವಾಗಿ ಬೆಳೆಯುವ ಕುರಿತು ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ರೈತರಿಗೆ ಕೂಲಂಕಷವಾಗಿ ಪರಿಚಯ ಮಾಡಿಕೊಡಬೇಕು. ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ನಾಗರಾಜಪ್ಪ ಅಡಿವಪ್ಪರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯದ 30 ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ದೇಶದ 79% ಅಡಿಕೆ ನಮ್ಮ ರಾಜ್ಯದಲ್ಲಿದೆ. ರೋಗ ಬಂದಾಗ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ ನಷ್ಟದಿಂದ ಪಾರಾಗಲು ಅಡಿಕೆಯೊಂದಿಗೆ ಮಿಶ್ರ ಬೆಳೆಗಳನ್ನು ಬೆಳೆಯುವ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಈಗಾಗಲೇ ಜಾಯಿಕಾಯಿ ಬೆಳೆದ ರೈತರು ತಮ್ಮ ಅನುಭವ ಹಂಚಿಕೊಳ್ಳುವರು ಎಂದರು.

ಅಡಿಕೆಯಲ್ಲಿ ಲಾಭದಾಯಕ ಮಿಶ್ರಬೆಳೆಯಾಗಿ ಜಾಯಿಕಾಯಿ ಕುರಿತಾದ ಮಡಿಕೆ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು

ತಾಂತ್ರಿಕ ಗೋಷ್ಟಿ: ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿ ಉತ್ಪಾದನಾ ತಾಂತ್ರಿಕತೆಗಳು ವಿಷಯ ಕುರಿತು ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ನಾಗರಾಜಪ್ಪ ಅಡಿವಪ್ಪರ್, ಜಾಯಿಕಾಯಿಯಲ್ಲಿ ನರ್ಸರಿ ತಾಂತ್ರಿಕತೆಗಳ ಕುರಿತು ಸಹಾಯಕ ಪ್ರಾಧ್ಯಾಪಕ ಡಾ.ಸುದೀಪ್ ಹೆಚ್.ಪಿ, ಜಾಯಿಕಾಯಿಯಲ್ಲಿ ಕೀಟಗಳ ನಿರ್ವಹಣೆ ಕುರಿತು ಸಹಾಯಕ ಪ್ರಾಧ್ಯಾಪಕಿ ಡಾ.ಸ್ವಾತಿ, ಜಾಯಿಕಾಯಿಯಲ್ಲಿ ರೋಗಗಳ ನಿರ್ವಹಣೆ ಕುರಿತು ಸಹಾಯಕ ಪ್ರಾಧ್ಯಾಪಕ ಡಾ.ಕಿರಣ್ ಕುಮಾರ್ ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಲಕ್ಷ್ಮಿಕಾಂತ ಬೊಮ್ಮಣ್ಣನವರ, ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಹೆಚ್ ಡಿ ದೇವಿಕುಮಾರ್, ಶಶಾಂಕ್, ಸಂಶೋಧನಾ ನಿರ್ದೇಶಕ ಡಾ.ದುಷ್ಯಂತ್ ಕುಮಾರ್, ಕಾಲೇಜಿನ ಡೀನ್ ಡಾ.ಡಿ.ತಿಪ್ಪೇಶ್, ಸಹ ಸಂಶೋಧನಾ ನಿರ್ದೇಶಕ ಡಾ.ಪ್ರದೀಪ್, ಹಿರಿಯ ವಿಜ್ಞಾನಿ ಡಾ.ಪಿ.ಸುನಿಲ್, ಹಳ್ಳಿಕೆರೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಡಾ. ಮಮತಾ ಬಿ. ಆರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಉಲ್ಲಾಸ್ ಮೆಸ್ತಾ ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು, ರೈತರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Agri UniversityFormerKannada News WebsiteLatest News KannadaLocal NewsMalnad NewsShimogaShivamoggaShivamogga Newsಉದ್ಯಮಿಕೃಷಿ ವಿಶ್ವವಿದ್ಯಾಲಯರಬ್ಬರ್ರೈತವಿಜ್ಞಾನಿಶಿವಮೊಗ್ಗಸಾಂಬಾರು ಪದಾರ್ಥ
Share196Tweet123Send
Previous Post

ಮಂಗಳೂರು | ಡಿ.20-ಜ.4ರವರೆಗೂ ಕರಾವಳಿ ಉತ್ಸವ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

Next Post

ಅಜೋಲಾ: ಪಶುಗಳಿಗೆ ಆಹಾರ, ಭೂಮಿಗೆ ಪೌಷ್ಟಿಕತೆಯ ವರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಜೋಲಾ: ಪಶುಗಳಿಗೆ ಆಹಾರ, ಭೂಮಿಗೆ ಪೌಷ್ಟಿಕತೆಯ ವರದಾನ

ಅಜೋಲಾ: ಪಶುಗಳಿಗೆ ಆಹಾರ, ಭೂಮಿಗೆ ಪೌಷ್ಟಿಕತೆಯ ವರದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
ಯೋಗಾಸನ ವಿಶ್ವ ಚಾಂಪಿಯನ್‌ಶಿಪ್ ಗೆ ಚಾಲನೆ: 60ಕ್ಕೂ ಹೆಚ್ಚು ದೇಶಗಳು ಭಾಗಿ!

ಯೋಗಾಸನ ವಿಶ್ವ ಚಾಂಪಿಯನ್‌ಶಿಪ್ ಗೆ ಚಾಲನೆ: 60ಕ್ಕೂ ಹೆಚ್ಚು ದೇಶಗಳು ಭಾಗಿ!

May 27, 2026
ಮನೆಯ ಹಿರಿಯರು ಹೇಳಿದ ಮಾತನ್ನು ಕೇಳಬೇಕು: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

ಮನೆಯ ಹಿರಿಯರು ಹೇಳಿದ ಮಾತನ್ನು ಕೇಳಬೇಕು: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

May 27, 2026
ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

May 27, 2026
ಬಾಲಕನ ಕೈಚಳಕ, ರಸ್ತೆಗೆ ಬಂದ ಬೊಲೇರೊ ಪಿಕಪ್ ವಾಹನ, ಆಗಿದ್ದೇನು?

ಬಾಲಕನ ಕೈಚಳಕ, ರಸ್ತೆಗೆ ಬಂದ ಬೊಲೇರೊ ಪಿಕಪ್ ವಾಹನ, ಆಗಿದ್ದೇನು?

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL