ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೀದಿ ನಾಯಿಯೊಂದು ಕಚ್ಚಿದ #Stray dog bite to Boy ಹಿನ್ನೆಲೆಯಲ್ಲಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ.
ವಿದ್ಯಾನಗರದ ನಿವಾಸಿ ಕೆ.ಟಿ. ಸುನೀಲ್ ಎಂಬುವರ ಪುತ್ರ ವೇದಾಂತ್ (7 ವರ್ಷ) ಗಾಯಗೊಂಡ ಬಾಲಕ ಎಂದು ಗುರುತಿಸಲಾಗಿದೆ.

ಮನೆಯ ಮುಂಭಾಗ ಬಾಲಕ ಆಟವಾಡುವ ವೇಳೆ, ಏಕಾಏಕಿ ನಾಯಿ ದಾಳಿ ನಡೆಸಿ ಐದು ಕಡೆ ಕಚ್ಚಿದೆ. ಬಾಲಕನ ಚೀರಾಟ ಗಮನಿಸಿದ ಮನೆಯವರು ನಾಯಿಯನ್ನು ಓಡಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಪ್ರದೇಶದಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಬೀದಿ ನಾಯಿಗಳಿದ್ದು, ಸ್ಥಳೀಯರಿಗೆ ತೊಂದರೆಯಾಗಿದೆ. ಈ ಸಮಸ್ಯೆ ಬಗ್ಗೆ ಮಹಾನಗರ ಪಾಲಿಕೆ ಆಡಳಿತದ ಗಮನಕ್ಕೆ ತಂದರೂ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post