ಕಲ್ಪ ಮೀಡಿಯಾ ಹೌಸ್ | ಹಾಸನ |
ಡಿ.6ರಂದು ನಡೆಯುವ ಸರ್ಕಾರಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಆಸಕ್ತಿವಹಿಸಿ ಜವಾಬ್ದಾರಿ ಮತ್ತು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ #Minister Krishna bairegowda ಅವರು ತಿಳಿಸಿದ್ದಾರೆ.
ಹಾಸನ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಡಿ.6 ರಂದು ನಡೆಯುವ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮದ ಸಿದ್ಧತೆ ಕುರಿತು ಇಂದು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ ಮಾತನಾಡಿದ ಅವರು ಫಲಾನುಭವಿಗಳನ್ನು ನಿಗಧಿತ ಸಮಯದಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ಕರೆದುಕೊಂಡು ಬರಲು ಮುತುವರ್ಜಿವಹಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಹಾಗೂ ವಿವಿಧ ಸಚಿವರುಗಳು ಭಾಗವಹಿಸಲಿರುವರು. ಅಧಿಕಾರಿಗಳು ಸ್ಥಳೀಯವಾಗಿ ಸಮನ್ವಯತೆಯಿಂದ ಸದರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದರಿಂದ ಸರ್ಕಾರಿ ಕಾರ್ಯಕ್ರಮವನ್ನು ಈ ರೀತಿ ಮಾಡಬಹುದು ಎಂಬುದನ್ನು ತೋರಿಕೊಟ್ಟಂತಾಗುತ್ತದೆ ಎಂದರು.

ಡಿ.6 ಕಾರ್ಯಕ್ರಮಕ್ಕೆ ಮುಖ್ಯ ಮಂತ್ರಿ ಅವರಿಗೆ ಆಹ್ವಾನ : ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರನ್ನು ಡಿ.6 ರಂದು ಹಾಸನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಇಂದು ಜಿಲ್ಲಾಡಳಿತದಿಂದ ಆಹ್ವಾನಿಸಲಾಯಿತು.
ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ, ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಖುದ್ದು ಆಹ್ವಾನ ಪತ್ರಿಕೆ ನೀಡಿ ಶ್ರೀಯುತರನ್ನು ಆಹ್ವಾನಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಂ.ಎ. ಗೋಪಾಲಸ್ವಾಮಿ, ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post