ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿಎಸ್ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ರಸಮೇವಿನ ಮಹತ್ವ ಮತ್ತು ತಯಾರಿಸುವ ವಿಧಾನ ಗುಂಪು ಚರ್ಚೆ ಮತ್ತು ಪ್ರಾತ್ಯಕ್ಷಿತೆಯನ್ನು ಚಿಕ್ಕಜೋಗಿಹಳ್ಳಿಯ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪಶುಪಾಲನ ಕ್ಷೇತ್ರದಲ್ಲಿ ಹಸಿರು ಮೇವು ನಿರಂತರವಾಗಿ ಲಭ್ಯವಾಗದಿರುವುದು ಒಂದು ದೊಡ್ಡ ಸಮಸ್ಯೆ. ಮಳೆ ಬಾರದ ಸಮಯ, ಬೇಸಿಗೆ, ಬರ, ಬೆಳೆ ನಷ್ಟ ಮುಂತಾದ ಕಾರಣಗಳಿಂದ ಹಸಿರು ಮೇವು ಕೊರತೆ ಉಂಟಾಗುತ್ತದೆ. ಈ ಕೊರತೆಯಿಂದ ಹಸು, ಎಮ್ಮೆ, ಕುರಿ, ಮೇಕೆ ಮುಂತಾದ ಪಶುಗಳ ಮೇಲೆ ನೇರ ಪರಿಣಾಮ ಉಂಟಾಗಿ ಹಾಲು ಉತ್ಪಾದನೆ ಕಡಿಮೆಗೊಳ್ಳುತ್ತದೆ. ಅದಕ್ಕಾಗಿ ರಚನೆಯನ್ನು ರೈತರ ತಯಾರಿಸಿ ಈ ಸಮಸ್ಯೆಯಿಂದ ಪಾರಾಗಬಹುದು ಎಂದು ಕೃಷಿ ವಿದ್ಯಾರ್ಥಿಗಳು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post