ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶದಾದ್ಯಂತ ಇಂಡಿಗೋ ವಿಮಾನ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ ಶಿವಮೊಗ್ಗ ವಿಮಾನ ನಿಲ್ದಾಣದಿಂದಲೂ ಸಹ ಇಂತಹುದ್ದೇ ಸಮಸ್ಯೆ ಉಂಟಾಗಿದೆ.
ಪ್ರತಿ ನಿತ್ಯ ಸಂಚರಿಸುವ ಬೆಂಗಳೂರು- ಶಿವಮೊಗ್ಗ – ಬೆಂಗಳೂರು ನಡುವಿನ ಇಂಡಿಗೋ ವಿಮಾನ ಹಾರಾಟ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.
ಬೆಂಗಳೂರು – ಶಿವಮೊಗ್ಗ- ಬೆಂಗಳೂರು ನಡುವಿನ ಇಂಡಿಗೋ ವಿಮಾನ ಹಾರಾಟ ಇಂದು ರದ್ದುಗೊಂಡಿದ್ದು, ಮುನ್ನವೇ ಬುಕ್ಕಿಂಗ್ ಮಾಡಿಕೊಂಡಿದ್ದ ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗಿದೆ.
ಇಂದು ಸುಮಾರು 60 ಪ್ರಯಾಣಿಕರು ಶಿವಮೊಗ್ಗದಿಂದ ಬೆಂಗಳೂರಿಗೆ ಟಿಕೇಟ್ ಬುಕ್ ಮಾಡಿಕೊಂಡಿದ್ದರು. ಆದರೆ, ಈ ವಿಮಾನ ಹಾರಾಟ ರದ್ದುಗೊಂಡಿದೆ.
ದೇಶದಾದ್ಯಂತ ಸುಮಾರು 1000ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದುಗೊಂಡಿದೆ. ಸಿಬ್ಬಂದಿ ಕೊರತೆ ಸೇರಿದಂತೆ ನಾನಾ ಕಾರಣಗಳಿಂದಾಗಿ ರದ್ದಾಗಿದ್ದು, ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















