ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕರ್ನಾಟಕದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಭೂಮಿಕೆಯನ್ನು ಶ್ರೀಮಂತಗೊಳಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಮಹೋತ್ಸವ “ಕ್ರಿಯೇಟಿವ್ ಆವಿರ್ಭವ–2025” ಡಿಸೆಂಬರ್ 4, 5 ಮತ್ತು 6, 2025 ರಂದು ವೈಭವದೊಂದಿಗೆ ನಡೆಯಲಿದೆ.
ಈ ಮೂರು ದಿನಗಳ ಸಂಭ್ರಮವು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್‌ನಲ್ಲಿ ವಿವಿಧ ಸಾಂಸ್ಕೃತಿಕ, ವಿದ್ಯಾಭ್ಯಾಸಿಕ ಮತ್ತು ಮನರಂಜನಾ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಲಿದೆ.

ಡಿ.6, ಬೆಳಗ್ಗೆ 10.30 ಕ್ಕೆ ಸಾಧಕರಿಗೆ ಗೌರವ ಸಮರ್ಪಣೆ, ಸನ್ಮಾನ್ಯ ಅತಿಥಿಗಳಿಂದ ಸಂದೇಶಗಳು ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಸಾವಿರಾರು ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಈ ಸಾಂಸ್ಕೃತಿಕ ಹಬ್ಬಕ್ಕೆ ಸಾಕ್ಷಿಯಾಗಲಿದ್ದಾರೆ.
ಆಕರ್ಷಣೀಯ ಕಾರ್ಯಕ್ರಮಗಳು:
5ರಂದು ಸಂಜೆ 7ರಿಂದ ಮ್ಯಾಜಿಕ್ ಶೋ ಪ್ರಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ರವರಿಂದ 6 ಡಿಸೆಂಬರ್ 2025, ಅಪರಾಹ್ನ 12.15 ರಿಂದ ಕ್ರಿಯೇಟಿವ್ ಸಾಹಿತ್ಯಸಾಂಗತ್ಯ ಸಂವಾದ: ಮಾತು ಕ(ವಿ)ತೆ. ಚುಟುಕುಬ್ರಹ್ಮ ಎಚ್. ಡುಂಡಿರಾಜ್ ರವರ ಉಪಸ್ಥಿತಿಯಲ್ಲಿ.

ಈ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಹಬ್ಬಕ್ಕೆ ಎಲ್ಲಾ ನಾಗರಿಕರು, ಶಿಕ್ಷಣ ಪ್ರೇಮಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಆಹ್ವಾನಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post